Breaking News

ಮಣಿಪುರದಲ್ಲಿಂದು 2ನೇ ಹಾಗೂ ಕೊನೆಯ ಹಂತದ ಮತದಾನ ಆರಂಭವಾಗಿದೆ. 6 ಜಿಲ್ಲೆಗಳ 22 ಕ್ಷೇತ್ರಗಳಲ್ಲಿ 92 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

Spread the love

ಇಂಪಾಲ್‌: ಮಣಿಪುರ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಕೊನೆಯ ಹಂತದ ಮತದಾನ ನಡೆಯುತ್ತಿದ್ದು, 6 ಜಿಲ್ಲೆಗಳ 22 ಕ್ಷೇತ್ರಗಳಲ್ಲಿ 92 ಅಭ್ಯರ್ಥಿಗಳ ಚುನಾವಣಾ ಭವಿಷ್ಯ ಇಂದು ನಿರ್ಧರಿಸಲಾಗುತ್ತಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 4ರವರೆಗೆ ನಡೆಯಲಿದೆ.

1,247 ಮತಗಟ್ಟೆಗಳಲ್ಲಿ ಮತದಾನ ನಡೆಸಲು ಎಲ್ಲ ವ್ಯವಸ್ಥೆ ಮಾಡಲಾಗಿದೆ. ತೌಬಲ್, ಚಾಂಡೆಲ್, ಉಖ್ರುಲ್, ಸೇನಾಪತಿ, ತಮೆಂಗ್ಲಾಂಗ್ ಮತ್ತು ಜಿರಿಬಾಮ್ ಜಿಲ್ಲೆಗಳಲ್ಲಿ ಒಟ್ಟು 8.38 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ ರಾಜೇಶ್ ಅಗರ್ವಾಲ್ ತಿಳಿಸಿದ್ದಾರೆ.

ಬಿಜೆಪಿ 2ನೇ ಹಂತದಲ್ಲಿ ನಡೆಯುತ್ತಿರುವ ಎಲ್ಲ ಕ್ಷೇತ್ರಗಳಿಗೂ(22) ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ (18), ನ್ಯಾಷನಲ್ ಪೀಪಲ್ಸ್ ಪಾರ್ಟಿ (11), ಜನತಾ ದಳ (ಯುನೈಟೆಡ್) ಹಾಗೂ ನಾಗಾ ಪೀಪಲ್ಸ್ ಫ್ರಂಟ್ ತಲಾ 10. ಶಿವಸೇನೆ, ಎನ್‌ಸಿಪಿ, ಸಿಪಿಐ ಮತ್ತು ಇತರ ಹಲವು ಪಕ್ಷಗಳ ಒಟ್ಟು 12 ಸ್ವತಂತ್ರರು ಸ್ಪರ್ಧಿಸಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ