Breaking News

ನಟರು ಡ್ರಗ್ಸ್ ತೆಗೆದುಕೊಳ್ಳುವುದನ್ನು ನಾನು ಕಣ್ಣಾರೆ ನೋಡಿದ್ದೇನೆ”:ಆದಿ ಲೋಕೇಶ್

Spread the love

ಬೆಂಗಳೂರು: ನಟರು ಡ್ರಗ್ಸ್ ತೆಗೆದುಕೊಳ್ಳುವುದನ್ನು ನಾನು ಕಣ್ಣಾರೆ ನೋಡಿದ್ದೇನೆ ಎಂದು ನಟ ಆದಿ ಲೋಕೇಶ್ ಲೋಕೇಶ್ ಅವರು ಹೇಳುವ ಮೂಲಕ ಹೊಸ ಬಂಬ್ ಸಿಡಿಸಿದ್ದಾರೆ.

ಚಂದನವನದ ತಾರೆಯರು ಡ್ರಗ್ಸ್ ತೆಗೆದುಕೊಳ್ಳುತ್ತಿದ್ದಾರೆ ಎಂಬ ಸುದ್ದಿ ದಿನೇ ದಿನೇ ಹೊಸ ರೂಪ ಪಡೆದುಕೊಳ್ಳುತ್ತಿದೆ. ಇಂದು ಈ ಬಗ್ಗೆ ಮಾತನಾಡಿರುವ ಆದಿ ಲೋಕೇಶ್ ಅವರು, ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ತೆಗೆದುಕೊಳ್ಳುವ ಯುವನಟರ ಬಗ್ಗೆ ಸ್ಫೋಟಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಡ್ರಗ್ಸ್ ವಿಚಾರದಲ್ಲಿ ಕೇವಲ ಸ್ಯಾಂಡಲ್‍ವುಡ್ ಅನ್ನು ಟಾರ್ಗೆಟ್ ಮಡೋದು ತಪ್ಪು. ಡ್ರಗ್ಸ್ ಎಲ್ಲಿಂದ ಬರುತ್ತಿದೆ, ಯಾರು ತರುತ್ತಿದ್ದಾರೆ ಅವರನ್ನು ಹಿಡಿದುಕೊಳ್ಳಬೇಕು. ಕೆಲವರು ಸಣ್ಣಗಾಗಲು, ದಪ್ಪಗಾಗಲು ಸ್ಟಿರಾಯ್ಡ್ ತೆಗೆದುಕೊಳ್ಳುತ್ತಾರೆ. ನಾನಂತೂ ಇವತ್ತಿನವರೆಗೂ ಯಾವ ರೇವ್ ಪಾರ್ಟಿಗೆ ಹೋಗಿಲ್ಲ. ನಾನು ಕೆಲ ನೈತಿಕ ನಿಯಮಗಳನ್ನು ಅಳವಡಿಸಿಕೊಂಡು ಜೀವನ ಮಾಡುತ್ತಿದ್ದೇನೆ ಎಂದು ಹೇಳಿದರು.


Spread the love

About Laxminews 24x7

Check Also

ಸೆಟ್ಟೇರಿತು ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾ..ಹೊಸ ನಿರ್ದೇಶಕರ ಜೊತೆ ಕೈ ಜೋಡಿಸಿದ ಕ್ರೇಜಿಸ್ಟಾರ್ ಪುತ್ರ

Spread the love ಸೆಟ್ಟೇರಿತು ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾ..ಹೊಸ ನಿರ್ದೇಶಕರ ಜೊತೆ ಕೈ ಜೋಡಿಸಿದ ಕ್ರೇಜಿಸ್ಟಾರ್ ಪುತ್ರ ಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ