Breaking News

ಬೆಂಗಳೂರಿನ ಬಾಗಮನೆ ಟೆಕ್​ಪಾರ್ಕ್​ನಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಸಾಫ್ಟ್​ವೇರ್ ಕಂಪನಿ ಕಚೇರಿ

Spread the love

ಬೆಂಗಳೂರು: ಹಲವು ಸಾಫ್ಟ್​ವೇರ್ ಕಂಪನಿಗಳ ಕಚೇರಿ ಇರುವ ನಗರದ ಬಾಗಮನೆ ಟೆಕ್​ಪಾರ್ಕ್​ನಲ್ಲಿ (Bagmane Tech Park) ಶನಿವಾರ ರಾತ್ರಿ 10 ಗಂಟೆ ವೇಳೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.

ಶಾರ್ಟ್​ ಸರ್ಕೀಟ್​ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬೆಂಕಿ ನಂದಿಸಲು ಬಂದಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಯ ಪೈಕಿ ಒಬ್ಬರಿಗೆ ತೀವ್ರ ಗಾಯಗಳಾಗಿವೆ. ಬೆಂಕಿ ನಂದಿಸುವ ವೇಳೆ ಆಯತಪ್ಪಿ 4ನೇ ಅಂತಸ್ತಿನಿಂದ ಕೆಳಗೆಬಿದ್ದ ಮಹದೇವಪುರ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ವಿನಯ್ ಕುಮಾರ್ ಅವರ ಕೈಕಾಲು ಮತ್ತು ತಲೆಯ ಭಾಗಕ್ಕೆ ಗಾಯವಾಗಿದೆ. ಅವರನ್ನು ತಕ್ಷಣವೇ ಆಂಬ್ಯುಲೆನ್ಸ್ ಮೂಲಕ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು. 4ನೇ ಮಹಡಿಯಿಂದ ಕೆಳಗೆ ಬಿದ್ದ ರಭಸಕ್ಕೆ ವಿನಯ್ ಕುಮಾರ್ ಅವರ ಕೈ, ಕಾಲು ಹಾಗೂ ತಲೆಗೆ ಪೆಟ್ಟು ಬಿದ್ದಿದೆ. ಪ್ರಸ್ತುತ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.


Spread the love

About Laxminews 24x7

Check Also

ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ BRP?*

Spread the love ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ