Breaking News

ಸರಕಾರಿ ನೌಕರರ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ವಿಷಾದಕರ: ಕೆಪಿಸಿಸಿ ವಕ್ತಾರ ರಮೇಶ್ ಬಾಬು

Spread the love

ಬೆಂಗಳೂರು, ಮಾ.5: 2022-23ನೆ ಸಾಲಿನ ಆಯವಯ್ಯದಲ್ಲಿ ರಾಜ್ಯದ ಸರಕಾರಿ ಮತ್ತು ಅರೆ ಸರಕಾರಿ ನೌಕರರ ಬೇಡಿಕೆಗಳನ್ನು ಹಾಗೂ ನಿರುದ್ಯೋಗಿ ಯುವಕರ ಧ್ವನಿಯನ್ನು ಪರಿಗಣಸದೆ ಇರುವುದು ವಿಷಾದಕರ ಸಂಗತಿಯಾಗಿದೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ, ಕೆಪಿಸಿಸಿ ವಕ್ತಾರ ರಮೇಶ್ ಬಾಬು ತಿಳಿಸಿದ್ದಾರೆ.

 

ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿರುವ ಅವರು, ರಾಜ್ಯದಲ್ಲಿ ಸುಮಾರು ಐದೂವರೆ ಲಕ್ಷ ಸರಕಾರಿ ಮತ್ತು ಅರೆ ಸರಕಾರಿ ನೌಕರರು ಕಾರ್ಯನಿರ್ವಹಿಸುತ್ತಿದ್ದು, ಆರನೇ ವೇತನ ಆಯೋಗದ ಶಿಫಾರಸ್ಸಿಗೆ ಅನುಗುಣವಾಗಿ ಅವರು ಪಡೆಯುತ್ತಿರುವ ವೇತನಗಳು ಜುಲೈ 2022ರ ವರೆಗೆ ಅನ್ವಯಗೊಳ್ಳಲಿವೆ ಎಂದು ತಿಳಿಸಿದ್ದಾರೆ.

ನಂತರ ಪರಿಷ್ಕೃತ ವೇತನವನ್ನು ಸರಕಾರಿ ಮತ್ತು ಅರೆ ಸರಕಾರಿ ನೌಕರರಿಗೆ ನೀಡಬೇಕಾಗಿರುತ್ತದೆ. ಇದಕ್ಕೆ ಪೂರಕವಾಗಿ ರಾಜ್ಯ ಸರಕಾರ ಏಳನೇ ವೇತನ ಆಯೋಗ ರಚನೆ ಮಾಡಬೇಕಾಗಿತ್ತು. ಆದರೆ, ಬಜೆಟ್‍ನಲ್ಲಿ ಈ ಯಾವುದೆ ಪ್ರಸ್ತಾಪ ಮಾಡದೆ ಇರುವುದು ದುರದೃಷ್ಟಕರ ಎಂದು ರಮೇಶ್ ಬಾಬು ತಿಳಿಸಿದ್ದಾರೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ