Breaking News

ಯುಪಿ ಭವಿಷ್ಯ ಅಖಿಲೇಶ್ ಯಾದವ್ ಕೈಯಲ್ಲಿ ಸುರಕ್ಷಿತವಾಗಿರುತ್ತೆ: ಮಯಾಂಕ್ ಜೋಶಿ

Spread the love

ಲಕ್ನೋ: ಉತ್ತರ ಪ್ರದೇಶದ ಭವಿಷ್ಯ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಕೈಯಲ್ಲಿ ಸುರಕ್ಷಿತವಾಗಿರುತ್ತದೆ ಎಂದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾದ ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಅವರ ಪುತ್ರ ಮಯಾಂಕ್ ಜೋಶಿ ಹೇಳಿದರು.

ನಾನು ಇಂದು ಸಮಾಜವಾದಿ ಪಕ್ಷಕ್ಕೆ ಸೇರಿದ್ದೇನೆ. ಅಖಿಲೇಶ್ ಯಾದವ್ ಅಭಿವೃದ್ಧಿ, ಮಹಿಳೆಯರ ಸುರಕ್ಷತೆ ಮತ್ತು ಯುವಕರ ಬಗ್ಗೆ ಮಾತನಾಡುತ್ತಾರೆ. ಯುವಕನಾಗಿದ್ದಾಗ, ಪ್ರಗತಿಪರವಾಗಿ ಮಾತನಾಡುವ ಅಂತಹ ವ್ಯಕ್ತಿಯ ಜೊತೆ ನಿಲ್ಲಲು ನಾನು ಯೋಚಿಸಿದೆ. ಉತ್ತರ ಪ್ರದೇಶದ ಭವಿಷ್ಯವು ಅವರ ಕೈಯಲ್ಲಿ ಸುರಕ್ಷಿತವಾಗಿರುತ್ತದೆ ಎಂದು ನಾನು ಭಾವಿಸುತ್ತೇನೆ ಎಂದರು.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಕೊನೆಯ ಹಂತಕ್ಕೂ ಮುನ್ನ ಮಯಾಂಕ್ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಅವರ ಸೇರ್ಪಡೆಯನ್ನು ಎಸ್‍ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಅಜಂಗಢದಲ್ಲಿ ನಡೆದ ಚುನಾವಣಾ ರ್‍ಯಾಲಿ ವೇಳೆ ಘೋಷಿಸಿದರು. 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ