ಹುಬ್ಬಳ್ಳಿ: ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಗೋಕುಲ ರಸ್ತೆಯಲ್ಲಿ ಸಾಕಷ್ಟು ಜಾಗ ಹೊಂದಿದ್ದರೂ ಗೋಕುಲ ಪೊಲೀಸ್ ಠಾಣೆ ಹೊಸ ಕಟ್ಟಡ ನಿರ್ಮಾಣಕ್ಕೆ ಜಾಗ ನೀಡುತ್ತಿಲ್ಲ. ಇಲ್ಲದ ಸಬೂಬು ಹೇಳುತ್ತಿದ್ದಾರೆ ಎಂದು ಪ್ರಾದೇಶಿಕ ನ್ಯಾಯವಿಜ್ಞಾನ ಪ್ರಯೋಗಾಲಯದ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಶಾಸಕ ಜಗದೀಶ ಶೆಟ್ಟರ್ ವೇದಿಕೆ ಮೇಲೆಯೇ ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರದ ಜಾಗವನ್ನು ಸರ್ಕಾರದ ಇನ್ನೊಂದು ಇಲಾಖೆಗೆ ಕೊಡಲು ಎಷ್ಟೊಂದು ಅಡೆತಡೆ? ಎಂದು ಪ್ರಶ್ನಿಸಿದರು.
ಇದಕ್ಕೆ ತಮ್ಮ ಭಾಷಣದಲ್ಲಿ ಪ್ರತಿಕ್ರಿಯಿಸಿದ ಬೊಮ್ಮಾಯಿ ಅವರು ‘ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಿದರೆ ಅಭಿವೃದ್ಧಿ ಸಾಧ್ಯ. ವಾಯವ್ಯ ಸಾರಿಗೆ ಇಲಾಖೆ ಗೋಕುಲ ಪೊಲೀಸ್ ಠಾಣೆಗೆ ಅರ್ಧ ಎಕರೆ ಜಾಗವನ್ನು ಕೊಡಬೇಕು. ಇದರಲ್ಲಿ ಯಾವುದೇ ವಿಳಂಬವಾಗುವಂತಿಲ್ಲ’ ಎಂದು ಖಡಕ್ಕಾಗಿ ಸೂಚನೆ ನೀಡಿದರು.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಗುರುದತ್ತ ಹೆಗಡೆ ‘ಸರಿ ಸರ್’ ಎಂದರು. ಇದಕ್ಕೆ ಪ್ರತಿಯಾಗಿ ಬೊಮ್ಮಾಯಿ ಬಾಯಿಮಾತಿನಲ್ಲಿ ಹೇಳಿದರೆ ಸಾಲದು, ಮಾ. 31ರ ಒಳಗೆ ಜಾಗ ಕೊಡಬೇಕು ಎಂದರು.
Laxmi News 24×7