Home / ರಾಜಕೀಯ / 7ನೇ ವೇತನ ಆಯೋಗ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ

7ನೇ ವೇತನ ಆಯೋಗ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ

Spread the love

ರಾಜ್ಯ ಸರ್ಕಾರಿ ನೌಕರರಿಗೆ ವೇತನ ಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ 7ನೇ ವೇತನ ಆಯೋಗ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.

 

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ.

ಬಜೆಟ್ ನಲ್ಲಿ 7 ನೇ ವೇತನ ಆಯೋಗ ರಚಿಸುವ ಕುರಿತು ಘೋಷಣೆ ಮಾಡದ ಬಗ್ಗೆ ಸರ್ಕಾರಿ ನೌಕರರಿಂದ ಅಸಮಾಧಾನ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ನೌಕರರ ಸಂಘದಿಂದ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿತ್ತು. ಸಿಎಂ ಬಸವರಾಜ ಬೊಮ್ಮಾಯಿ ಅವರು, ಬಜೆಟ್ ನಂತರವೂ ವೇತನ ಆಯೋಗ ರಚನೆಗೆ ಅವಕಾಶವಿದ್ದು, ನೌಕರರಿಗೆ ಆತಂಕಬೇಡ. 7ನೇ ವೇತನ ಆಯೋಗ ರಚನೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ 


Spread the love

About Laxminews 24x7

Check Also

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ