Breaking News

ಡಬಲ್‌ ಇಂಜಿನ್‌ ಸರ್ಕಾರ ಅಲ್ಲ, ಡಬ್ಬಾ ಸರ್ಕಾರ: ಮುನ್ನೋಟ ಇಲ್ಲದ ಬಜೆಟ್‌: ಸಿದ್ದರಾಮಯ್ಯ

Spread the love

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರ ಮಂಡಿಸಿರುವ 2022-23ನೇ ಸಾಲಿನ ಬಜೆಟ್‌ ಮೇಲಿನ ಚರ್ಚೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಇಂದು ಕಲಾಪ ಆರಂಭವಾಗುತ್ತಿದ್ದಂತೆ ಸ್ಪೀಕರ್‌ ಪ್ರಶ್ನೋತ್ತರಕ್ಕೆ ಅವಕಾಶ ನೀಡಿದರು. ಇದಾದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಬಜೆಟ್‌ ಬಗ್ಗೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆ ನಿರೀಕ್ಷೆ ಹುಸಿಯಾಗಿದೆ. ಕಳೆದ ಮೂರು ವರ್ಷಗಳಲ್ಲಿ ಸರ್ಕಾರ ಏನೇನು ಮಾಡಿದೆ ಎಂಬುದನ್ನು ಎಲ್ಲೂ ಹೇಳಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದು ಪ್ರತಿ ಕುಟುಂಬಸ್ಥರ ಬಜೆಟ್‌. ಇದನ್ನು ಗಮನದಲ್ಲಿ ಇಟ್ಟುಕೊಂಡು ಬಜೆಟ್‌ ಮಂಡಿಸಬೇಕು. ನಾನು ಮಂಡಿಸದ ಬಜೆಟ್‌ನಲ್ಲೂ ಭಿನ್ನಾಭಿಪ್ರಾಯಗಳು ಇರಬಹುದು. ಆದರೆ ಪ್ರಾಮಾಣಿಕವಾದ ಪ್ರಯತ್ನ, ಪಾರದರ್ಶಕವಾದ ಬಜೆಟ್‌ ಪ್ರಯತ್ನಿಸಿದ್ದೇನೆ ಎಂದರು. ಈ ಬಾರಿ ಮಂಡಿಸಿರುವ ಬಜೆಟ್‌ನಲ್ಲಿ ವಲಯವಾರು ಮಾಹಿತಿಯೇ ಸಿಗುತ್ತಿಲ್ಲ. ಕೃಷಿಗೆ ಎಷ್ಟು, ನೀರಾವರಿಗೆ ಎಷ್ಟು, ಕಳೆದ ವರ್ಷ ಎಷ್ಟು ಘೋಷಿಸಲಾಗಿತ್ತು ಎಂಬುದು ಸೇರಿದಂತೆ ಇದ್ಯಾವುದರ ಮಾಹಿತಿಯೇ ಇಲ್ಲ ಎಂದರು.


Spread the love

About Laxminews 24x7

Check Also

ಕುರಿ ಕಾಯುವವನ ಮಗನ ಯುಪಿಎಸ್ಸಿ ಸಾಧನೆ

Spread the loveಬೆಳಗಾವಿ: ತಂದೆ ಕುರಿ ಕಾಯುತ್ತಾರೆ. ತಾಯಿ ಹೊಲದಲ್ಲಿ ಕೆಲಸ ಮಾಡುತ್ತಾರೆ. ಮನೆಯಲ್ಲಿ ಬಡತನ. ಮಗನಿಗೆ ಮಾತ್ರ ಇಡೀ ದೇಶವೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ