Breaking News

ಮಾ.7; ಜಾಗತಿಕ ಕಚ್ಚಾತೈಲ ಬೆಲೆ ಭಾರೀ ಏರಿಕೆ; ಭಾರತದಲ್ಲಿ ಇಂಧನ ದರವೆಷ್ಟು?

Spread the love

ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ಏಳು ವರ್ಷಗಳ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 100 ಯುಎಸ್ ಡಾಲರ್ ಗಡಿ ದಾಟಿದೆ. ಇಂದು ಮತ್ತೆ ಸಾರ್ವಕಾಲಿಕ ಏರಿಕೆ ಕಂಡಿದೆ. ಈ ನಡುವೆ ಭಾರತದ ಸರ್ಕಾರಿ ತೈಲ ಕಂಪನಿಗಳು ಇಂದು ಸೋಮವಾರ (ಮಾರ್ಚ್, 7) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿದ್ದು, ಇಂದು ಕೂಡ ಇಂಧನ ದರದಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ.

ದೇಶದ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಕಳೆದ ನವೆಂಬರ್​ 4ರಿಂದ ಇಂಧನ ದರ ಸ್ಥಿರವಾಗಿದೆ.

ಜಾರ್ಖಂಡ್​ ಸರ್ಕಾರ ದ್ವಿಚಕ್ರ ವಾಹನ ಸವಾರರಿಗೆ ಪೆಟ್ರೋಲ್ ಬೆಲೆಯಲ್ಲಿ 25 ರೂ. ಕಡಿತಗೊಳಿಸಿದ ನಂತರ ಕಳೆದ ಜನವರಿ 26ರಿಂದ ಜಾರಿಗೆ ಬಂದಿದೆ. ಉಳಿದಂತೆ ಎಲ್ಲೆಡೆ ಇಂಧನ ದರ ಸ್ಥಿರವಾಗಿದ್ದು, ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಂದು ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿರುವುದರಿಂದ ಮುಂದಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಾಣುವ ಸಾಧ್ಯತೆ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತವಾಗುತ್ತಿದ್ದರೂ, ಅದು ಪೆಟ್ರೋಲ್​- ಡೀಸೆಲ್​ ಬೆಲೆಯ ಮೇಲೆ ಯಾವುದೇ ಪ್ರಭಾವ ಬೀರುತ್ತಿಲ್ಲ.

ವರದಿಗಳ ಪ್ರಕಾರ, ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್​ಗೆ 128.1 ಯುಸ್ ಡಾಲರ್​ನಂತೆ ವ್ಯವಹಾರ ನಡೆಸುತ್ತಿದೆ. ನಿನ್ನೆಯ ಸೆಷನ್​ಗೆ ಹೋಲಿಸಿದರೆ 9.96 ಡಾಲರ್ ಏರಿಕೆಯಾಗಿದೆ. ಆದರೆ ಭಾರತದಲ್ಲಿ ಕಳೆದ ವರ್ಷದ ನವೆಂಬರ್​ನಲ್ಲಿ ಸರ್ಕಾರದಿಂದ ತೈಲ ಬೆಲೆಯ ಅಬಕಾರಿ ಸುಂಕ ಇಳಿಕೆ ಮಾಡಿದ ಮೇಲೆ ಬೆಲೆ ಸ್ಥಿರವಾಗಿಯೇ ಇದೆ.


Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ