Breaking News

ಭಾರತಕ್ಕೆ ಬಿಗ್ ಆಫರ್ ನೀಡಿದ ರಷ್ಯಾ ಅಧ್ಯಕ್ಷ ಪುಟಿನ್. ಕಡಿಮೆ ಬೆಲೆಯಲ್ಲಿ ಕಚ್ಚಾ ತೈಲ ಪೂರೈಕೆಯ ಆಫರ್.

Spread the love

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಜೊತೆ ಸುಮಾರು 50 ನಿಮಿಷಗಳ ಕಾಲ ಚರ್ಚಿಸಿದ್ದಾರೆ. ಹಾಟ್​​ಲೈನ್​ ಮೂಲಕ ಉಭಯ ನಾಯಕರು ಮಹತ್ವದ ಚರ್ಚೆ ನಡೆಸಿದ್ದಾರೆ.

 ವಿಶ್ವ ಸಂಸ್ಥೆಯ ವೋಟಿಂಗ್​ನಲ್ಲಿ ಭಾರತ ತಟಸ್ಥ ನಿಲುವು ತಾಳಿದ್ದಕ್ಕೆ ಹಾಗೂ ಭಾರತ ರಷ್ಯಾ ವಿರುದ್ಧ ಮತ ಚಲಾಯಿಸದೆ, ಮತದಾನದಿಂದ ದೂರ ಉಳಿದಿದ್ದಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಬಿಗ್ ಆಫರ್ ನೀಡಿದ್ದಾರೆ.

ಕಡಿಮೆ ಬೆಲೆಯಲ್ಲಿ ಶೇ.25 ರಿಂದ ಶೇ.27 ವರೆಗೆ ರಿಯಾಯಿತಿಯಲ್ಲಿ ಕಚ್ಚಾ ತೈಲ ಪೂರೈಕೆ ಮಾಡುವ ಆಫರ್ ನೀಡಿದ್ದಾರೆ. ಇದರ ಜೊತೆಗೆ ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಸ್ಥಳಾಂತರ ಬಗ್ಗೆಯೂ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ