ಬೆಂಗಳೂರು: ಮತದಾನೋತ್ತರ ಸಮೀಕ್ಷೆಯಂತೆ ನಾಲ್ಕು ರಾಜ್ಯಗಳಲ್ಲಿ ಬಿಜೆಪಿಗೆ ಜಯ ಖಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು.ಉತ್ತರ ಪ್ರದೇಶ, ಉತ್ತರಾಖಂಡ , ಗೋವಾ, ಮಣಿಪುರ ರಾಜ್ಯಗಳಲ್ಲಿ ಬಿಜೆಪಿ ಜಯ ಸಾಧಿಸುವುದು ಚುನಾವಣೆ ಸಂದರ್ಭದಲ್ಲಿಯೇ ತಿಳಿದಿತ್ತು. ಆ ನಿರೀಕ್ಷೆಗೆ ತಕ್ಕಂತೆಯೇ ಎಕ್ಸಿಟ್ ಪೋಲ್ ಹೇಳಿದೆ. ಇನ್ನೆರಡು ದಿನ ಕಾದು ನೋಡೋಣ ಎಂದರು.