ರಾಜ್ಯ ಸರ್ಕಾರ ಗೃಹ ರಕ್ಷಕ ದಳದ ಸಿಬ್ಬಂದಿಯ ಭತ್ಯೆಯನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ. ಸುಮಾರು ೨೦೨೫ ಗೃಹ ರಕ್ಷಕ ಸ್ವಯಂ ಸೇವಕರಿಗೆ ಇದರ ಲಾಭ ಸಿಗಲಿದೆ.
ಗೃಹ ರಕ್ಷಕ ಸ್ವಯಂಸೇವಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರ ಬಹುದಿನದ ಬೇಡಿಕೆ ಈಡೇರಿದಂತಾಗಿದೆ. ಸರ್ಕಾರದ ಈ ನಿರ್ಧಾರದಿಂದ ಬಹುದಿನದ ಬೇಡಿಕೆ ಈಡೇರಿರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಅಲ್ಲದೇ ಪೊಲೀಸ್ ಇಲಾಖೆ ಹೊರತು ಪಡಿಸಿ ಪೌರ ರಕ್ಷಣಾ ಇಲಾಖೆಯ ಸ್ವಯಂ ಸೇವಕರಿಗೆ ನೀಡಲಾಗುತ್ತಿರುವ ದಿನ ಭತ್ಯೆಯನ್ನು ರೂಪಾಯಿ ೬೦೦ ರೂ.ಗೆ ಹೆಚ್ಚಿಸಲಾಗಿದೆ.