ಕಲಬುರಗಿ: ವಿದ್ಯುತ ಶಾರ್ಟ್ ಸರ್ಕ್ಯೂಟ್‌ನಿಂದ ಗದ್ದೆಯಲ್ಲಿ ಬೆಳೆದ ಕಬ್ಬು ಸುಟ್ಟು ಭಸ್ಮವಾದ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಅವರಳ್ಳಿ ಗ್ರಾಮದಲ್ಲಿ ನಡೆದಿದೆ.
ಯಲ್ಲಾಲಿಂಗ ಪಾಟೀಲ್ ಮತ್ತು ಮಲ್ಲಮ್ಮಾ ಪಾಟೀಲ್‌ಗೆ ಸೇರಿದ ಕಬ್ಬಿನ ಗದ್ದೆ ಇದಾಗಿದೆ. ೭ ಎಕರೆ ೧೯ ಗುಂಟೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿದೆ. ಲಕ್ಷಾಂತರ ರೂ ಮೌಲ್ಯದ ಸುಮಾರು ೫೦೦ ಟನ್ ಕಬ್ಬು ಸುಟ್ಟು ಕರಕಲಾಗಿದೆ.
ವಿದ್ಯುತ್ ತಂತಿಗಳು ಜೊತು ಬಿದ್ದಿರುವ ಪರಿಣಾಮ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿದೆ. ಘಟನೆಯು ದೇವಲ್ ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Laxmi News 24×7