ಲಕ್ನೋ: ಉತ್ತರಪ್ರದೇಶದ ವಾರಣಾಸಿಯಲ್ಲಿ ಇವಿಎಂನ್ನು ಅಕ್ರಮವಾಗಿ ಸಾಗಿಸಲಾಗಿದೆ ಎಂಬ ಅಖಿಲೇಶ್ ಯಾದವ್ ಅವರ ಆರೋಪದ ನಂತರ ಅಧಿಕಾರಿಯೊಬ್ಬರು ಲೋಪ ಮಾಡಿರುವುದಾಗಿ ಒಪ್ಪಿಕೊಂಡಿರುವ ವೀಡಿಯೋವೊಂದನ್ನು ಅವರ ಸಮಾಜವಾದಿ ಪಕ್ಷದ ನಾಯಕರು ಟ್ವೀಟ್ ಮಾಡಿದ್ದಾರೆ.
ವಾರಣಾಸಿಯ ಕಮಿಷನರ್ ದೀಪಕ್ ಅಗರ್ವಾಲ್ ಮಾತನಾಡಿ, ನೀವು ಇವಿಎಂಗಳ ಚಲನೆಯ ಪ್ರೋಟೋಕಾಲ್ ಬಗ್ಗೆ ಮಾತನಾಡಿದರೆ, ಪ್ರೋಟೋಕಾಲ್‍ನಲ್ಲಿ ಲೋಪವಿದೆ ಎಂಬುದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ಮತದಾನದಲ್ಲಿ ಬಳಸುವ ಯಂತ್ರಗಳನ್ನು ತೆಗೆದುಕೊಂಡು ಹೋಗುವುದು ಅಸಾಧ್ಯ ಎಂದು ತಿಳಿಸಿದ್ದಾರೆ.ಎಣಿಕೆ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು, ಭದ್ರತಾ ಸಿಬ್ಬಂದಿ ಮತ್ತು ರಾಜಕೀಯ ಪಕ್ಷದ ಪ್ರತಿನಿಧಿಗಳು ಇದ್ದರು. ರಾಜಕೀಯ ಪಕ್ಷದ ಕಾರ್ಯಕರ್ತರು ಕಣ್ಣಿಡಲು ಕೇಂದ್ರಗಳ ಹೊರಗೆ ಕುಳಿತುಕೊಳ್ಳಬಹುದು ಎಂದರು.