ಬೆಳಗಾವಿ: ಪಂಚರಾಜ್ಯಗಳ ಚುನಾವಣೆಯ ಫಲಿತಾಂಶ ಮಾರ್ಚ್ 10ರಂದು ಪ್ರಕಟವಾಗಲಿದೆ. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಗೋವಾದಲ್ಲಿ ಠಿಕಾಣಿ ಹೂಡಿದ್ದಾರೆ.
ಚುನಾವಣೋತ್ತರ ಸಮೀಕ್ಷೆಗಳು ಗೋವಾದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ ಎಂದು ಭವಿಷ್ಯ ನುಡಿವೆ. ಈ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಅಲರ್ಟ್ ಆಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಗೋವಾ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರಿಗೂ ಗೋವಾಗೆ ಹೋಗಲು ಸೂಚನೆ ನೀಡಿದೆ.
ಗೋವಾ ವಿಧಾನಸಭೆ ಚುನಾವಣೆಯ ಅಂತಿಮ ಫಲಿತಾಂಶ ಬರುವವರೆಗೆ ಅಲ್ಲೇ ಇರಬೇಕು. ಫಲಿತಾಂಶ ಅತಂತ್ರವಾಗಿ ಅದರ ಲಾಭ ಪಡೆಯುವ ಅವಕಾಶವಿದ್ದರೆ, ಅದನ್ನು ಬಳಸಿಕೊಂಡು ಪಕ್ಷ ಅಧಿಕಾರಕ್ಕೆ ತರಲು ಬೇಕಾದ ಪ್ರಯತ್ನ ಮಾಡಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ತಿಳಿಸಿದೆ.
Laxmi News 24×7