Breaking News

ರಶ್ಮಿಕಾ ಅಭಿನಯದ ಚೊಚ್ಚಲ ಹಿಂದಿ ಸಿನೆಮಾ ‘ಮಿಷನ್ ಮಜ್ನು’ ರಿಲೀಸ್​ಗೆ ಮುಹೂರ್ತ ಫಿಕ್ಸ್​

Spread the love

ಮುಂಬೈ ( ಮಹಾರಾಷ್ಟ್ರ) : ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ರಶ್ಮಿಕಾ ಮಂದಣ್ಣಾ ಅಭಿನಯದ ಬೇಹುಗಾರಿಕೆಯ ಕಥೆಯುಳ್ಳ ಮಿಷನ್ ಮಜ್ನು ಸಿನೆಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಬಹಿರಂಗಪಡಿಸಿದೆ.

ಹಲವು ಹಿಟ್ ಸಿನೆಮಾಗಳನ್ನು ನೀಡಿರುವ, ಸದ್ಯ ಪುಷ್ಪ ಸಿನೆಮಾದಲ್ಲಿ ನಟಿಸಿದ್ದ ರಶ್ಮಿಕಾ ಮಂದಣ್ಣಾ ಇದೇ ಮೊದಲ ಬಾರಿಗೆ ಹಿಂದಿ ಸಿನೆಮಾದಲ್ಲಿ ನಟಿಸಿದ್ದಾರೆ. ಮಿಷನ್ ಮಜ್ನು ರಶ್ಮಿಕಾ ಮಂದಣ್ಣಾ ಅಭಿನಯದ ಚೊಚ್ಚಲ ಹಿಂದಿ ಸಿನೆಮಾವಾಗಿದ್ದು, ಜೂನ್ 10 ರಂದು ತೆರೆಕಾಣಲಿದೆ ಎಂದು ಚಿತ್ರ ತಂಡ ಹೇಳಿದೆ.

1970 ರ ದಶಕದ ಬೇಹುಗಾರಿಕೆ ಥ್ರಿಲ್ಲರ್ ಕಥೆಯನ್ನು ಹೊಂದಿರುವ ಈ ಸಿನೆಮಾದಲ್ಲಿ ನಟ ಸಿದ್ಧಾರ್ಥ್ ಮಲ್ಹೋತ್ರಾ ಒಬ್ಬ ರಾ ಏಜೆಂಟ್ ಆಗಿ ಕಾಣಿಸಿಕೊಂಡಿದ್ದಾರೆ. ಇದು ಪಾಕಿಸ್ತಾನಿ ನೆಲದಲ್ಲಿ ರಹಸ್ಯ ಕಾರ್ಯಾಚರಣೆಯನ್ನು ನಡೆಸುವ ಕುರಿತ ಚಿತ್ರವಾಗಿದ್ದು, ನೈಜ ಘಟನೆಗಳನ್ನು ಆಧರಿಸಿದ ಚಿತ್ರ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಅಸ್ಸಾಂ, ತಮಿಳುನಾಡು, ಕೇರಳಕ್ಕೆ ಏ.9 ರಂದು ಚುನಾವಣೆ – ಮೇ 4 ರಂದು ಫಲಿತಾಂಶ

Spread the loveನವದೆಹಲಿ: 4 ರಾಜ್ಯ  ಮತ್ತು 1 ಕೇಂದ್ರಾಡಳಿತ ಪ್ರದೇಶದ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿದೆ. ಅಸ್ಸಾಂ, ತಮಿಳುನಾಡು,ಕೇರಳ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ