ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಗಾಂಧಿನಗರದ ಸುಖಸಾಗರ್ ಹೋಟೆಲ್ನ ಐದು ಮತ್ತು ಆರನೇ ಮಹಡಿಯಲ್ಲಿ ಬುಧವಾರ ಮಧ್ಯಾಹ್ನ ಬೆಂಕಿ ಧಗಧಗಿಸಿದೆ.
ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.
ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಹಾಗೂ ಉಪ್ಪಾರಪೇಟೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡ ಶಂಕೆ ವ್ಯಕ್ತವಾಗಿದೆ.
Laxmi News 24×7