Breaking News

ಭಿಕ್ಷೆ ಬೇಡುತ್ತಾ ತಮ್ಮ ಜೀವನ ಸಾಗಿಸುವ ಮಂಗಳಮುಖಿ ಕೊಲೆ

Spread the love

ಚಿತ್ರದುರ್ಗ: ಭಿಕ್ಷೆ ಬೇಡುತ್ತಾ ತಮ್ಮ ಜೀವನ ಸಾಗಿಸುವ ಮಂಗಳಮುಖಿ ನಡುವೇ ಅಪರೂಪದ ವ್ಯಕ್ತಿತ್ವ ಎನಿಸಿದ್ದ ಚಿತ್ರದುರ್ಗದ ಮಂಗಳಮುಖಿಯೊಬ್ಬರು ಯಾರಿಗೂ ಬಾರವಾಗದೇ ತನ್ನಲ್ಲಿದ್ದ ಕಲೆಯನ್ನು ಬಂಡವಾಳವಾಗಿಸಿಕೊಂಡು ಬದುಕು ಕಟ್ಟಿಕೊಂಡಿದ್ದರು. ಆದರೆ ಅವರ ಏಳಿಗೆಯನ್ನು ಸಹಿಸದ ಯಾರೋ ದುಷ್ಕರ್ಮಿಗಳು ಮಂಗಳಮುಖಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಅಂಜಲಿ (34) ಕೊಲೆಯಾದ ಮಂಗಳಮುಖಿ. ಚಿತ್ರದುರ್ಗದ ಗಾಂಧಿ ನಗರದಲ್ಲೊಂದು ಬಾಡಿಗೆ ಮನೆಮಾಡಿಕೊಂಡಿದ್ದರು. ದೈನಂದಿನ ಜೀವನಕ್ಕಾಗಿ ತನ್ನಲ್ಲಿದ್ದ ನೃತ್ಯ, ಕರಗ ಹಾಗೂ ನಟನೆಯ ಕಲೆಯನ್ನೇ ಬಂಡವಾಳವನ್ನಾಗಿಸಿಕೊಂಡು ಬದುಕು ಕಟ್ಟಿಕೊಂಡಿದ್ದರು. ಆದರೆ ಶುಕ್ರವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಂಜಲಿಯ ಶವ ಭಾನುವಾರ ಬರ್ಬರವಾಗಿ ಕೊಲೆಯಾಗಿರುವ ಸ್ಥಿತಿಯಲ್ಲಿ ಪಾಲವ್ವನಹಳ್ಳಿ ಬಳಿಯ ಜಮೀನೊಂದರಲ್ಲಿ ಪತ್ತೆಯಾಗಿದೆ.

 

ಆಕೆಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಂದಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಮೂರು ವರ್ಷಗಳಿಂದ ಚಿತ್ರದುರ್ಗದಲ್ಲಿ ನೆಲೆಸಿದ್ದ ಈಕೆಯು ಕನ್ನಡ ಸಂಸ್ಕೃತಿ ಇಲಾಖೆಯಿಂದ ಗೌರವ ಧನ ಪಡೆಯುತಿದ್ದಳು. ಆದರೆ ಈಕೆಯ ಏಳಿಗೆ ಸಹಿಸದ ದುಷ್ಕರ್ಮಿಗಳು ಕೊಲೆಗೈದಿದ್ದಾರೆ. ಆ ಕೊಲೆ ಪಾತಕರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಹಿರಿಯ ಮಂಗಳಮುಖಿಯೊಬ್ಬರು ಹೇಳಿದ್ದಾರೆ.

ಅಂಜಲಿಯೊಂದಿಗೆ ಹೆಚ್ಚಿನ ಒಡನಾಟ ಹಾಗೂ ಬಾಂಧವ್ಯವನ್ನು ಹೊಂದಿದ್ದ ಚಿತ್ರದುರ್ಗದ ಮಂಗಳಮುಖಿಯರು ಘಟನಾ ಸ್ಥಳಕ್ಕೆ ಧಾವಿಸಿ ಕಣ್ಣೀರಿಟ್ಟಿದ್ದಾರೆ. ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ. ಸ್ಥಳಕ್ಕೆ ಎಪ್‍ಸಿ ರಾಧಿಕಾ ಹಾಗೂ ಎಎಸ್‍ಪಿ ನಂದಗಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ