Breaking News

ಶೀಘ್ರದಲ್ಲೇ ಕಡಬ ತಾಲೂಕು ಕಛೇರಿಗೆ ಸಿಸಿ ಕ್ಯಾಮರಾ ಅಳವಡಿಕೆ: ಜಿಲ್ಲಾಧಿಕಾರಿ

Spread the love

ಕಡಬ: ತಾಲೂಕು ಕಛೇರಿಯಲ್ಲಿ ಅಧಿಕಾರಿಗಳ ಅವ್ಯವಹಾರಗಳ ಸಮಗ್ರ ತನಿಖೆ ನಡೆಸುತ್ತೇನೆ, ಕೇವಲ ಎಚ್ಚರಿಕೆ ಕೊಟ್ಟು ಅಲ್ಲಿಗೆ ಬಿಡುವುದಿಲ್ಲ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ.

ಇಂದು ಕಡಬ ತಾಲೂಕು ಕಛೇರಿಗೆ ಭೇಟಿ ನೀಡಿದ ಅವರು ಅಧಿಕಾರಿಗಳು ಹಾಗೂ ಸಿಬ್ಬಂದಿಯ ವಿಚಾರಣೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಕಡಬ ಕಂದಾಯ ಇಲಾಖೆಯಲ್ಲಿ ಅಕ್ರಮ-ಸಕ್ರಮ ಹಾಗೂ ಪ್ಲಾಟಿಂಗ್​​​​ಗೆ ಸಂಬಂಧಪಟ್ಟ ಫೈಲ್​​ಗಳ ವಿಲೇವಾರಿಯಲ್ಲಿ ಅವ್ಯವಹಾರಗಳು ನಡೆಯುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಮತ್ತು ಇಲಾಖೆಯಲ್ಲಿ ಮಧ್ಯವರ್ತಿಗಳು ಅಧಿಕಾರಿಗಳೊಂದಿಗೆ ಶಾಮಿಲಾಗಿರುವ ವಿಚಾರಕ್ಕೆ ಸಂಬಂಧಿಸಿ ಸಮಗ್ರ ತನಿಖೆ ನಡೆಸುತ್ತೇನೆ ಎಂದರು.

ನಾನು ಕೇವಲ ಎಚ್ಚರಿಕೆ ಕೊಟ್ಟು ಹೋಗುವುದಿಲ್ಲ, ಎಲ್ಲವನ್ನೂ ತನಿಖೆ ಮಾಡುತ್ತೇನೆ. ಅಧಿಕಾರಿಗಳು ಫಲಾನುಭವಿಗಳನ್ನು ಯಾವುದೇ ಕಾರಣಕ್ಕೂ ಸತಾಯಿಸುವಂತಿಲ್ಲ, ಅಲ್ಲದೆ ಕಂದಾಯ ಇಲಾಖೆಯಲ್ಲಿರುವ ದಾಖಲೆಗಳನ್ನು ಅರ್ಜಿದಾರರು ತರದಿದ್ದರೂ ಅಧಿಕಾರಿಗಳೇ ಆ ದಾಖಲೆಗಳನ್ನು ಸಿದ್ದಪಡಿಸಬೇಕು. ಹಣ ಅಥಾವ ಇನ್ನಾವುದೋ ವಿಚಾರಕ್ಕೆ ಸಾರ್ವಜನಿಕರನ್ನು ಸತಾಯಿಸುವುದು ಕಂಡು ಬಂದರೆ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು, ಅಧಿಕಾರಿಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ ಜನರ ವಿಶ್ವಾಸಗಳಿಸಬೇಕು ಎಂದರು.

ತಾಲೂಕು ಕಛೇರಿಯಲ್ಲಿ ಅಕ್ರಮ ಸಕ್ರಮ ಕಡತ, ಪ್ಲಾಟಿಂಗ್, ಮುಂತಾದ ಕಂದಾಯ ಇಲಾಖಾ ಕಡತಗಳನ್ನು ಮಂಜೂರು ಮಾಡುವಲ್ಲಿ, ಕಾನೂನುಬಾಹಿರ ಕೃತ್ಯ ಅಥವಾ ಭ್ರಷ್ಟಚಾರ ನಡೆಸಿದ್ದು ಕಂಡು ಬಂದಲ್ಲಿ ಆ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುವುದು. ಈಗಾಗಲೇ ಕೇಸ್ವರ್ಕರ್ಗಳನ್ನು ಕರೆಸಿ ಅವರಿಗೆ ವಹಿಸಿರುವ ಕೆಲಸಗಳ ಕಡತಗಳನ್ನು ಪರಿಶಿಲಿಸದಾಗ, ಅಕ್ರಮಗಳು ನಡೆದಿರುವುದು ಕಂಡು ಬಂದಿದೆ. ಆದ್ದರಿಂದ ಇವರಿಗೆಲ್ಲ ಎಚ್ಚರಿಕೆ ನೀಡಿ ಬಿಡಲಾಗುವುದು ಎಂದು ಭಾವಿಸುವುದು ಬೇಡ, ಇವರ ವಿರುದ್ಧ ತನಿಖೆ ನಡೆಸಲಾಗುವುದು.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ