Breaking News

ಉತ್ತರ ಪ್ರದೇಶ ಅಂಚೆ ಮತ ಎಣಿಕೆ: ಆರಂಭದಲ್ಲಿ ಬಿಜೆಪಿ ಮುನ್ನಡೆ

Spread the love

ಲಕ್ನೋ: ಉತ್ತರ ಪ್ರದೇಶ ಚುನಾವಣೆಯ ಮತ ಎಣಿಕೆ ಆರಂಭಗೊಂಡಿದ್ದು ಆರಂಭದ ಅಂಚೆ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಬಿಜೆಪಿ 25, ಎಸ್‌ಪಿ 18 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಅಂಚೆ ಮತ ಎಣಿಕೆಯಲ್ಲಿ ಮುನ್ನಡೆ ಪಡೆದರೂ ಮಧ್ಯಾಹ್ನದ ವೇಳೆ ಫಲಿತಾಂಶ ಸ್ಪಷ್ಟವಾಗಲಿದೆ. 2024ರ ಲೋಕಸಭಾ ಚುನಾವಣೆ ಮತ್ತು ರಾಷ್ಟ್ರಪತಿ ಚುನಾವಣೆಯಲ್ಲಿ ಬಹು ಮುಖ್ಯ ಪಾತ್ರವನ್ನು ವಹಿಸಲಿದೆ. 

ಚುನಾವಣೋತ್ತರ ಸಮೀಕ್ಷೆಗಳು ಸಿಎಂ ಯೋಗಿ ಆದಿತ್ಯನಾಥ್‌ ನೇತೃತ್ವದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ.

ಉತ್ತರ ಪ್ರದೇಶದಲ್ಲಿ ಒಟ್ಟು 403 ಕ್ಷೇತ್ರಗಳಿದ್ದು ಬಹುಮತಕ್ಕೆ 202 ಸ್ಥಾನಗಳು ಬೇಕು. 2017ರ ಚುನಾವಣೆಯಲ್ಲಿ

ಬಿಜೆಪಿ 312, ಬಿಎಸ್‌ಪಿ 19, ಎಸ್‌ಪಿ+ಕಾಂಗ್ರೆಸ್ 54, ಇತರರು 18 ಕ್ಷೇತ್ರಗಳಲ್ಲಿ ಜಯಗಳಿಸಿದ್ದರು.

 


Spread the love

About Laxminews 24x7

Check Also

ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ

Spread the loveಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ