Breaking News

ಮಹಿಳಾ ಪೊಲೀಸ್ ಪೇದೆಯೊಬ್ಬರು ಬಾವಿಯಲ್ಲಿ ಶವವಾಗಿ ಪತ್ತೆ

Spread the love

ಕಲಬುರಗಿ: ಮಹಿಳಾ ಪೊಲೀಸ್ ಪೇದೆಯೊಬ್ಬರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಯಡ್ರಾಮಿ ತಾಲೂಕಿನ ಸುಂಬಡ ಗ್ರಾಮದಲ್ಲಿ ನಡೆದಿದೆ.

34 ವರ್ಷದ ಸುರೇಖಾ ಬಾವಿಯಲ್ಲಿ ಶವವಾಗಿ ಪತ್ತೆಯಾದ ಮಹಿಳಾ ಪೇದೆ. ಮೃತ ಸುರೇಖಾ ಕಲಬುರಗಿ ನಗರದಲ್ಲಿ ಗುಪ್ತಚರ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಭಾನುವಾರ ಸಂಜೆ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಕೆಲ ತಿಂಗಳ ಹಿಂದೆ ಸುರೇಖಾ ಪತಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದರು. ಇದೀಗ ಮಹಿಳಾ ಪೇದೆ ಸುರೇಖಾ ಕೂಡ ಸಾವನ್ನಪ್ಪಿದ್ದಾರೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಇದು ಆತ್ಮಹತ್ಯೆಯೇ ಎಂಬುದು ತನಿಖೆಯಿಂದ ತಿಳಿಯಬೇಕಿದೆ ಎಂದು ಸಂಬಂಧಿಕರು ಹೇಳಿದ್ದಾರೆ.

ಈ ಕುರಿತು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


Spread the love

About Laxminews 24x7

Check Also

ನವೀಕೃತ ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನ ಉದ್ಗಾಟಿಸಿದ :ಸಚಿವ‌ ಪ್ರಿಯಾಂಕ್ ಖರ್ಗೆ

Spread the loveಕಲಬುರಗಿ : ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸ್ಥಳೀಯ ಶಾಸಕ ಡಾ.ಅವಿನಾಶ ಜಾಧವ ಅವರೊಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ