ಬೆಂಗಳೂರು: ಅಧಿಕಾರ ಇರುವ ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದೆ ಅಷ್ಟೇ. ಇದರಿಂದ ಬಹಳ ಜಂಬ ಪಡುವ ಹಾಗಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.
ವಿಧಾನಸೌಧದಲ್ಲಿ ಪಂಚ ರಾಜ್ಯ ಚುನಾವಣೆಯ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ಇನ್ನೂ ಪೂರ್ಣ ಫಲಿತಾಂಶ ಪ್ರಕಟವಾಗಿಲ್ಲ. ಪಂಜಾಬ್ನಲ್ಲಿ ಮಾತ್ರ ನಾವು ಅಧಿಕಾರದಲ್ಲಿದ್ದೆವು. ಬೇರೆ ರಾಜ್ಯಗಳಲ್ಲಿ ನಾವು ಅಧಿಕಾರದಲ್ಲಿರಲಿಲ್ಲ. ಉತ್ತರಾಖಂಡ, ಗೋವಾದಲ್ಲಿ ಗೆಲುವಿನ ನಿರೀಕ್ಷೆ ಇತ್ತು. ನಮ್ಮ ತಪ್ಪಿನಿಂದ ಪಂಜಾಬ್ನಲ್ಲಿ ಅಧಿಕಾರ ಕಳೆದುಕೊಂಡಿದ್ದೇವೆ ಎಂದರು.
ಈ ಚುನಾವಣೆಗಳಿಂದ ನಾನೇನು ಬಹಳ ಏನು ನಿರೀಕ್ಷೆ ಇಟ್ಟಿರಲಿಲ್ಲ. ಆದ್ರೆ ಗೋವಾ, ಉತ್ತರಾಖಂಡದಲ್ಲಿ ಅಧಿಕಾರಕ್ಕೆ ಬರಬಹುದೆಂಬ ಅಂದಾಜು ಇತ್ತು. ಈ ಚುನಾವಣೆಯಿಂದ ಧೈರ್ಯ ಕಳೆದುಕೊಳ್ಳುವಂಥದ್ದೇನಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
Laxmi News 24×7