Home / ರಾಜಕೀಯ / ಅಧಿಕಾರ ಇರುವ ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದೆ, ಜಂಬ ಪಡುವ ಅಗತ್ಯ ಇಲ್ಲ: ಸಿದ್ದರಾಮಯ್ಯ

ಅಧಿಕಾರ ಇರುವ ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದೆ, ಜಂಬ ಪಡುವ ಅಗತ್ಯ ಇಲ್ಲ: ಸಿದ್ದರಾಮಯ್ಯ

Spread the love

ಬೆಂಗಳೂರು: ಅಧಿಕಾರ ಇರುವ ರಾಜ್ಯಗಳಲ್ಲಿ ಬಿಜೆಪಿ ಗೆದ್ದಿದೆ ಅಷ್ಟೇ. ಇದರಿಂದ ಬಹಳ ಜಂಬ ಪಡುವ ಹಾಗಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.

ವಿಧಾನಸೌಧದಲ್ಲಿ ಪಂಚ ರಾಜ್ಯ ಚುನಾವಣೆಯ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ಇನ್ನೂ ಪೂರ್ಣ ಫಲಿತಾಂಶ ಪ್ರಕಟವಾಗಿಲ್ಲ. ಪಂಜಾಬ್​​​​ನಲ್ಲಿ ಮಾತ್ರ ನಾವು ಅಧಿಕಾರದಲ್ಲಿದ್ದೆವು. ಬೇರೆ ರಾಜ್ಯಗಳಲ್ಲಿ ನಾವು ಅಧಿಕಾರದಲ್ಲಿರಲಿಲ್ಲ. ಉತ್ತರಾಖಂಡ, ಗೋವಾದಲ್ಲಿ ಗೆಲುವಿನ ನಿರೀಕ್ಷೆ ಇತ್ತು. ನಮ್ಮ ತಪ್ಪಿನಿಂದ ಪಂಜಾಬ್​​ನಲ್ಲಿ ಅಧಿಕಾರ ಕಳೆದುಕೊಂಡಿದ್ದೇವೆ ಎಂದರು.

ಈ ಚುನಾವಣೆಗಳಿಂದ ನಾನೇನು ಬಹಳ ಏನು ನಿರೀಕ್ಷೆ ಇಟ್ಟಿರಲಿಲ್ಲ. ಆದ್ರೆ ಗೋವಾ, ಉತ್ತರಾಖಂಡದಲ್ಲಿ ಅಧಿಕಾರಕ್ಕೆ ಬರಬಹುದೆಂಬ ಅಂದಾಜು ಇತ್ತು. ಈ ಚುನಾವಣೆಯಿಂದ ಧೈರ್ಯ ಕಳೆದುಕೊಳ್ಳುವಂಥದ್ದೇನಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ