Breaking News

ನಾಲ್ಕು ಲಕ್ಷ ಮಹಿಳೆಯರಿಗೆ ಉದ್ಯೋಗದ ಯೋಜನೆ: ಸಿಎಂ

Spread the love

ಬೆಂಗಳೂರು: ನಾಲ್ಕು ಲಕ್ಷ ಮಹಿಳೆಯರಿಗೆ ಉದ್ಯೋಗ ನೀಡಲು ಯೋಜನೆ ರೂಪಿಸಲಾಗಿದ್ದು, ಈ ಬಗ್ಗೆ ಬಜೆಟ್ ನಲ್ಲಿ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಗರದ ಮಹಾಲಕ್ಷ್ಮಿ ಲೇಔಟ್ ಶಂಕರಮಠ ಬಡಾವಣೆಯಲ್ಲಿ ಮಹಾಲಕ್ಷ್ಮೀ ಎಜುಕೇಷನಲ್ ಟ್ರಸ್ಟ್ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೆಣ್ಣಿಲ್ಲದೆ ಈ ಜಗತ್ತು ಇಲ್ಲ. ಇಂದು ಎಲ್ಲಾ ರಂಗದಲ್ಲಿ ಮಹಿಳೆಯರಿದ್ದಾರೆ. ಮುಂದಿನ ದಿನಗಳಲ್ಲಿ ಮಹಿಳೆಯರು ಎಲ್ಲಾ ರಂಗದಲ್ಲಿ ಮುಂಚೂಣಿಯಲ್ಲಿರಲಿದ್ದಾರೆ ಎಂದರು.

ಮಹಿಳೆಯರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಮಹಿಳಾ ಸಂಘಕ್ಕೆ 1.50 ಲಕ್ಷ ರೂ. ಸಹಾಯಧನ ನೀಡಲಾಗುವುದು. ಒಟ್ಟು 41 ಸಾವಿರ ಕೋಟಿ ರೂ. ಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕಾಗಿ ಮೀಸಲಿಡಲಾಗಿದ್ದು, ಮಹಿಳೆಯರು ಮತ್ತು ಮಕ್ಕಳ ಆರೋಗ್ಯ, ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಬಜೆಟ್ ನ ಪ್ರಯೋಜನವನ್ನು ಸರಿಯಾಗಿ ಬಳಸುವುದರಿಂದ ರಾಜ್ಯದ ಆರ್ಥಿಕತೆಯನ್ನು ಸಬಲತೆಯ ಕಡೆಗೆ ಕೊಂಡೊಯ್ಯಬಹುದು ಎಂದು ಸಿಎಂ ಹೇಳಿದರು.


Spread the love

About Laxminews 24x7

Check Also

ಗೃಹ ಕಾರ್ಮಿಕರಿಗೆ ಶೀಘ್ರದಲ್ಲೇ ಶಾಸನಬದ್ಧ ರಕ್ಷಣೆ, ಕನಿಷ್ಠ ವೇತನ; ಬೆಳಗಾವಿ ಅಧಿವೇಶನದಲ್ಲಿ ಮಸೂದೆ ಮಂಡಿಸಲು ಸರ್ಕಾರದ ಸಿದ್ಧತೆ

Spread the love ಬೆಂಗಳೂರು: ರಾಜ್ಯಾದ್ಯಂತ ಸುಮಾರು 8 ಲಕ್ಷ ಗೃಹ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವ ಉದ್ದೇಶದ ಮಹತ್ವದ ಕಾನೂನನ್ನು ಜಾರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ