ಲಕ್ನೋ: ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಬುಲ್ಡೋಜರ್ ಟ್ರೆಂಡ್ ಆಗಿದೆ.
ಬುಲ್ಡೋಜರ್ ಟ್ರೆಂಡ್ ಆಗಲು ಕಾರಣವಿದೆ. ಉತ್ತರ ಪ್ರದೇಶದಲ್ಲಿ ಅಧಿಕಾರಕ್ಕೆ ಏರಿದ ಯೋಗಿ ಆದಿತ್ಯನಾಥ್ ಸರ್ಕಾರ ಅಕ್ರಮ ಕಟ್ಟಡಗಳೆಂದು ಬಹಳಷ್ಟು ಕಟ್ಟಡಗಳನ್ನು ಕೆಡವಿ ಹಾಕಿತ್ತು. ಯೋಗಿ ಈ ತೆರವು ಕ್ರಮಗಳನ್ನು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಟೀಕಿಸಿ ‘ಬುಲ್ಡೋಜರ್ ಬಾಬಾ’ ಎಂದು ವ್ಯಂಗ್ಯವಾಡಿದ್ದರು.ಯೋಗಿ ಆದಿತ್ಯನಾಥ್ ಬುಲ್ಡೋಜರ್ ಅನ್ನು ಅಭಿವೃದ್ಧಿ ಹಾಗೂ ಶಕ್ತಿಯ ಸಂಕೇತ ಎಂದು ಬಿಂಬಿಸಿದ್ದರು. ಬಿಜೆಪಿ ತನ್ನ ಚುನಾವಣಾ ಪ್ರಚಾರದಲ್ಲಿ ಅನಧಿಕೃತ, ಅಕ್ರಮ ಕಟ್ಟಡಗಳನ್ನು ಕೆಡವುವ ಮೂಲಕ ಭೂಮಾಫಿಯಾಗೆ ಬಿಸಿ ಮುಟ್ಟಿಸುವ ಹಾಗೂ ಎಕ್ಸ್‌ಪ್ರೆಸ್ ಹೈವೇಗಳನ್ನು ಕಟ್ಟುವ ಸಾಧನವಾಗಿ ಅದನ್ನು ಬಿಂಬಿಸಿತ್ತು.