Breaking News

ಬಾಗಲಕೋಟೆಯಿಂದ ಧಾರವಾಡಕ್ಕೆ ಬಂದ 22 ವರ್ಷದ ಯುವತಿ ದುರಂತ ಅಂತ್ಯ

Spread the love

ಧಾರವಾಡ: ಕೆಎಎಸ್​ ಎಕ್ಸಾಂ ಪಾಸ್​ ಮಾಡಬೇಕು, ಒಳ್ಳೆಯ ಅಧಿಕಾರಿಯಾಗಿ ಜನಸೇವೆ ಮಾಡಬೇಕು ಎಂದು ಮಹತ್ತರ ಕನಸು ಕಟ್ಟಿಕೊಂಡು ಬಾಗಲಕೋಟೆಯಿಂದ ಧಾರವಾಡಕ್ಕೆ ಬಂದ 22 ವರ್ಷದ ಯುವತಿ ದುರಂತ ಅಂತ್ಯ ಕಂಡಿದ್ದಾಳೆ.

ಬಾಗಲಕೋಟೆ ಜಿಲ್ಲೆಯ ರಬಕವಿ ತಾಲೂಕಿನ ಯರಗಟ್ಟಿ ಗ್ರಾಮದ ಗೀತಾ ಹೆಗ್ಗಣ್ಣವರ್(22) ಮೃತ ದುರ್ದೈವಿ. ಕೆಎಎಸ್ ಪರೀಕ್ಷೆಗೆ ಕೋಚಿಂಗ್ ಪಡೆಯಲೆಂದು ಧಾರವಾಡಕ್ಕೆ ಬಂದಿದ್ದ ಗೀತಾ, ಸಪ್ತಾಪುರ ಬಡಾವಣೆಯ ಅಶ್ವಿನಿ ಎಂಬ ಪಿಜಿಯಲ್ಲಿ ಉಳಿದುಕೊಂಡಿದ್ದಳು.

 

ಗುರುವಾರ ಬೆಳಗ್ಗೆ ಪಿಜಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಅಶ್ವಿನಿಯ ಶವಪತ್ತೆಯಾಗಿದೆ. ಸಾವಿಗೂ ಮುನ್ನ ಆಕೆ ಬರೆದಿಟ್ಟ ಡೆತ್ ನೋಟ್ ಪತ್ತೆಯಾಗಿದ್ದು, ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ, ಡೆತ್ ನೋಟ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅದರಲ್ಲಿ ಏನಿದೆ ಎಂಬುದು ಇನ್ನೂ ಬಹಿರಂಗವಾಗಿಲ್ಲ.


Spread the love

About Laxminews 24x7

Check Also

ಪರಪ್ಪನ ಅಗ್ರಹಾರ ಜೈಲೋ? ರೆಸಾರ್ಟೋ?

Spread the loveಬೆಂಗಳೂರು, ಅಕ್ಟೋಬರ್​ 09: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ರೌಡಿ ಶೀಟರ್​ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಣೆಯ ವಿಚಾರ ವ್ಯಾಪಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ