ರಾಯಚೂರು: ಅಂತ್ಯೋದಯ ಮತ್ತು ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಮಾರ್ಚ್ ಮಾಹೆಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿ ಮತ್ತು ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಪಡಿತರ ಚೀಟಿಯಲ್ಲಿನ ಪ್ರತಿ ಸದ್ಯಸರಿಗೆ 5 ಕೆ.ಜಿ ಅಕ್ಕಿ ಹಾಗೂ ಪ್ರತಿ ಬಿಪಿಎಲ್ ಪಡಿತರ ಚೀಟಿಗೆ 2ಕೆ.ಜಿ ಗೋಧಿ ಉಚಿತವಾಗಿ ವಿತರಿಸಲಾಗುತ್ತದೆ.
ಒಪ್ಪಿಗೆ ಅಥವಾ ಸಮ್ಮತಿ ಸೂಚಿಸಿರುವ ಎಪಿಎಲ್ ಪಡಿತರ ಚೀಟಿದಾರರಿಗೆ ರಿಯಾಯಿತಿ ದರದಲ್ಲಿ ಪ್ರತಿ ಕೆ.ಜಿಗೆ 15 ರೂ. ರಂತೆ ಏಕ ಸದಸ್ಯರ ಪಡಿತರ ಚೀಟಿಗೆ 5 ಕೆ.ಜಿ ಅಕ್ಕಿ ಹಾಗೂ ಎರಡು ಮತ್ತು ಹೆಚ್ಚಿನ ಕುಟುಂಬ ಸದಸ್ಯರಿರುವ ಎ.ಪಿ.ಎಲ್ ಪಡಿತರ ಚೀಟಿಗೆ 10ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.
ಅಂತರ್ ರಾಜ್ಯ ಅಥವಾ ಅಂತರ್ ಜಿಲ್ಲೆ ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.