Breaking News

4 ರಾಜ್ಯಗಳಲ್ಲಿ ಬಿಜೆಪಿ ವಿಜಯ – ಗುಜರಾತ್‍ನಲ್ಲಿ ಮೋದಿ ಭರ್ಜರಿ ರೋಡ್ ಶೋ

Spread the love

ಗಾಂಧೀನಗರ: ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರದಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಬೆನ್ನೆಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇದೀಗ ಗುಜರಾತ್ ಚುನಾವಣೆಯತ್ತ ಗಮನ ಹರಿಸಿದ್ದು, ಅಹಮದಾಬಾದ್‍ನಲ್ಲಿ ಇಂದು ರೋಡ್ ಶೋ ನಡೆಸಿದರು.

ಅಹಮದಾಬಾದ್ ವಿಮಾನ ನಿಲ್ದಾಣದಿಂದ ಗಾಂಧಿನಗರದಲ್ಲಿರುವ ಬಿಜೆಪಿ ರಾಜ್ಯ ಕಚೇರಿವರೆಗೂ ಹೂವಿನಿಂದ ಅಲಂಕರಿಸಲ್ಪಟ್ಟ ತೆರೆದ ಕಾರಿನಲ್ಲಿ ಮೋದಿ ಅವರು ರೋಡ್ ನಡೆಸಿದರು. ಈ ನಡುವೆ ರಸ್ತೆಯ ಬದಿಗಳಲ್ಲಿ ಮೋದಿ ಅವರನ್ನು ನೋಡಲು ಮುಗಿಬಿದ್ದಿದ್ದ ಜನರತ್ತ ಮೋದಿ ಕೈ ಬೀಸಿದರು. ಜೊತೆಗೆ ಬಿಜೆಪಿ ಕಾರ್ಯಕರ್ತರು ಜೈ ಶ್ರೀ ರಾಮ್ ಮತ್ತು ಭಾರತ್ ಮಾತಾ ಕೀ ಜೈ ಎಂಬ ಘೋಷಣೆಗಳನ್ನು ಕೂಗುತ್ತಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ