ಬೆಂಗಳೂರು : ‘ಕೋವಿಡ್ ಸಾಂಕ್ರಾಮಿಕ ಕಾಯಿಲೆ ಈಗ ಬಹುತೇಕ ಕಡಿಮೆಯಾಗಿದೆ.
ಹೀಗಾಗಿ, ಮನೆಯಿಂದ ಕೆಲಸ ಮಾಡುವ ಅವಕಾಶವನ್ನು ಕಂಪನಿಗಳು ಇನ್ನು ಮುಂದೆ ಸ್ಥಗಿತಗೊಳಿಸಬೇಕು’ ಎಂದು ಇನ್ಫೊಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ ಪ್ರತಿಪಾದಿಸಿದರು.
ಡೆಕ್ಕನ್ ಹೆರಾಲ್ಡ್ ಶುಕ್ರವಾರ ಆಯೋಜಿಸಿದ್ದ ‘ಡಿಎಚ್ ಬೆಂಗಳೂರು 2040 ಶೃಂಗ’ದಲ್ಲಿ ಮಾತನಾಡಿದ ಅವರು, ಮನೆಯಿಂದ ಕೆಲಸ ಮಾಡುವ ಸ್ವರೂಪವನ್ನು ಸಮಗ್ರವಾಗಿ ಬದಲಾಯಿಸಬೇಕು ಎಂದು ಪ್ರತಿಪಾದಿಸಿದರು.
‘ಮನೆಯಿಂದ ಕೆಲಸ ಮಾಡುವುದು ನನಗಂತೂ ಇಷ್ಟ ಇಲ್ಲ. ಮನೆಯಿಂದ ಉದ್ಯೋಗಿಗಳು ಕೆಲಸ ಮಾಡಿದರೆ ಕೆಲಸದಲ್ಲಿ ಉತ್ಕೃಷ್ಟತೆ, ಸೃಜನಶೀಲತೆಯೂ ಸಾಧ್ಯವಾಗುವುದಿಲ್ಲ. ಕೆಲಸದ ಗುಣಮಟ್ಟದ ಮೇಲೆಯೂ ಪರಿಣಾಮ ಬೀರುತ್ತದೆ’ ಎಂದು ಅಭಿಪ್ರಾಯಪಟ್ಟರು