Breaking News

ಲಾಂಗ್​ ಹಿಡಿದು ಕಾಲೇಜು ವಿದ್ಯಾರ್ಥಿಗಳನ್ನು ಅಟ್ಟಾಡಿಸಿದ ಪುಡಿ ರೌಡಿಗಳು:

Spread the love

ಬೆಂಗಳೂರು: ಪುಡಿ ರೌಡಿಗಳ ಅಟ್ಟಹಾಸಕ್ಕೆ ಬೆಚ್ಚಿ ಬಿದ್ದಿರುವ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳು ಆತಂಕದಲ್ಲೇ ದಿನ ದೂಡುತ್ತಿರವ ಪ್ರಕರಣ ಬೆಳಕಿಗೆ ಬಂದಿದೆ.

ಮಟಮಟ ಮಧ್ಯಾಹ್ನವೇ ಪುಡಿ ರೌಡಿಗಳು ಲಾಂಗ್ ಹಿಡಿದು ವಿದ್ಯಾರ್ಥಿಗಳನ್ನು ಅಟ್ಟಾಡಿಸಿ ಭಯದ ವಾತಾವರಣವನ್ನು ಸೃಷ್ಟಿ ಮಾಡಿದ್ದಾರೆ.

ಈ ಘಟನೆ ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿ ವಾಣಿ ವಿದ್ಯಾಸಂಸ್ಥೆ ಬಳಿ ನಡೆದಿದೆ. ಪುಡಿ ರೌಡಿಗಳ ಹಾವಳಿಗೆ ಸ್ಥಳೀಯರ ಸಹ ಬೆಚ್ಚಿಬಿದ್ದಿದ್ದು, ನಗರದ ಕಾನೂನು ಸುವ್ಯವಸ್ಥೆಯ ಮೇಲೆ ಪ್ರಶ್ನೆ ಮಾಡುವಂತಿದೆ.

ಲಾಂಗ್ ಹಿಡಿದು ವಿದ್ಯಾರ್ಥಿಗಳ ಬಳಿ ಪುಡಿ ರೌಡಿಗಳು ‌ಸುಲಿಗೆ ಮಾಡಿದ್ದಾರೆ. ಜೀವ ಉಳಿಸಿಕೊಳ್ಳಲು ಕೆಲವು ವಿದ್ಯಾರ್ಥಿಗಳು ಫ್ಯಾಕ್ಟರಿ ಶೆಡ್​ ಸೇರಿದರೆ, ಅಲ್ಲಿಗೂ ನುಗ್ಗಿದ ರೌಡಿಗಳು ವಿದ್ಯಾರ್ಥಿಗಳನ್ನು ಬೆದರಿಸಿದ್ದಾರೆ. ಒಂದೇ ದಿನ ಮೂರು ಕಡೆ ಸುಲಿಗೆ ಮಾಡಿದ್ದಾರೆ. ರೌಡಿಗಳ ಪುಂಡಾಟ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಲಾಂಗ್​ ಹಿಡಿದು ವಿದ್ಯಾರ್ಥಿಗಳನ್ನು ಅಟ್ಟಾಡಿಸಿಕೊಂಡು ಬರುತ್ತಿರುವ ದೃಶ್ಯ ಮತ್ತು ವಿದ್ಯಾರ್ಥಿಗಳು ಹೆದರಿ ಓಡುತ್ತಿರುವ ದೃಶ್ಯ ಸ್ಪಷ್ಟವಾಗಿ ಗೋಚರವಾಗುತ್ತದೆ.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ