Breaking News

ಪ್ರಿಯಕರನ ಎದುರಲ್ಲೇ ಪ್ರೆಯಸಿಯನ್ನು ಮರಕ್ಕೆ ಕಟ್ಟಿ ಹಾಕಿ ಅತ್ಯಾಚಾರವೆಸಗಿದ ದುಷ್ಕರ್ಮಿಗಳು..!

Spread the love

ಯುವತಿಯನ್ನು ಮರಕ್ಕೆ ಕಟ್ಟಿ ಹಾಕಿ ಆಕೆಯ ಪ್ರಿಯಕರನ ಮುಂದೆ ದುಷ್ಕರ್ಮಿಗಳು ಅತ್ಯಾಚಾರವೆಸಗಿರುವ ಘಟನೆ ಕ್ರಿಶನ್ ಜಿಲ್ಲೆಯ ಮಚಲಿಪಟ್ಟಣಂ ಬೀಚ್‍ನಲ್ಲಿ ನಡೆದಿದೆ. ಗುಂಟೂರಿನ ಆಂಧ್ರಪ್ರದೇಶದ ಪೊಲೀಸ್ ಕೇಂದ್ರ ಕಚೇರಿಯಿಂದ 75 ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದ್ದು, ಇದೀಗ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಮಚಲಿಪಟ್ಟಣಂನ ಬಂದರ್ ಮಂಡಲ್‍ನ ಪಲ್ಲಿಪಾಲೆಮ್ ಬೀಚ್‍ಗೆ ಜೋಡಿ ತೆರಳಿದ್ದ ವೇಳೆ ಇಬ್ಬರು ದುಷ್ಕರ್ಮಿಗಳು ಹಲ್ಲೆ ನಡೆಸಿ ಯುವತಿ ಮೇಲೆ ಅತ್ಯಾಚಾರ ಮಾಡಿದ್ದಾರೆ.

ದುಷ್ಕರ್ಮಿಗಳು ಯುವತಿಯ ಬಾಯ್‍ಫ್ರೆಂಡ್‍ನನ್ನು ಸಹ ಮರಕ್ಕೆ ಕಟ್ಟಿ ಹಾಕಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಇದೀಗ ಈ ಸಂಬಂಧ ಬಂದರ್ ಗ್ರಾಮಾಂತರ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಪಿ.ನಾಗಬಾಬುವನ್ನು ಬಂಧಿಸಿದ್ದಾರೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ