Breaking News

ಯುಪಿಯಲ್ಲಿ ಬಿಜೆಪಿ ಗೆಲ್ಲಿಸಿದ ಮಾಯಾವತಿ,ಓವೈಸಿಗೆ ಪದ್ಮವಿಭೂಷಣ, ಭಾರತ ರತ್ನ ನೀಡಬೇಕು’: ಶಿವಸೇನೆ

Spread the love

ಮುಂಬೈ(ಮಹಾರಾಷ್ಟ್ರ): ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಭರ್ಜರಿ ಗೆಲುವು ದಾಖಲು ಮಾಡಿ, ಸತತ ಎರಡನೇ ಅವಧಿಗೆ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಈ ವಿಷಯವಾಗಿ ಮಾತನಾಡಿರುವ ಶಿವಸೇನೆಯ ಸಂಜಯ್ ರಾವತ್,​​ ಬಹುಜನ ಸಮಾಜವಾದಿ ಪಕ್ಷದ ಅಧ್ಯಕ್ಷೆ ಮಾಯಾವತಿ ಹಾಗೂ ಎಐಎಂಐಎಂ ಮುಖ್ಯಸ್ಥ ಓವೈಸಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಉತ್ತರಪ್ರದೇಶದಲ್ಲಿ ಬಿಜೆಪಿ ಗೆಲುವು ಸಾಧಿಸುವಲ್ಲಿ ಕೊಡುಗೆ ನೀಡಿರುವ ಓವೈಸಿ, ಮಾಯಾವತಿಗೆ ಪದ್ಮ ವಿಭೂಷಣ ಅಥವಾ ಭಾರತ ರತ್ನ ನೀಡಬೇಕು ಎಂದಿರುವ ರಾವತ್​, ಬಿಜೆಪಿ ಅದ್ಭುತ ವಿಜಯ ಸಾಧಿಸಿದೆ. ಈ ಗೆಲುವಿನಲ್ಲಿ ಮಾಯಾವತಿ ಮತ್ತು

ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಗೆಲುವು ಸಾಧಿಸಿದೆ. ಅದರ ಬಗ್ಗೆ ನನಗೆ ಬೇಸರವಿಲ್ಲ. ನಿಮ್ಮ ಸಂತೋಷದಲ್ಲಿ ನಾವು ಭಾಗಿಯಾಗುತ್ತೇವೆ. ಆದರೆ, ಉತ್ತರಾಖಂಡ ಮುಖ್ಯಮಂತ್ರಿ, ಗೋವಾದ ಇಬ್ಬರು ಡೆಪ್ಯುಟಿ ಸಿಎಂ ಸೋಲು ಕಂಡಿದ್ಯಾಕೆ? ಒಂದು ರಾಷ್ಟ್ರೀಯ ಪಕ್ಷ ಪಂಜಾಬ್​​ನಲ್ಲಿ ಸಂಪೂರ್ಣವಾಗಿ ನೆಲಕಚ್ಚಿದೆ.

ಇದರ ಬಗ್ಗೆ ಆ ಪಕ್ಷ ಚಿಂತನೆ ನಡೆಸಬೇಕು ಎಂದರು. ಪ್ರಧಾನಮಂತ್ರಿ, ಗೃಹ ಮಂತ್ರಿ, ರಕ್ಷಣಾ ಸಚಿವರು ಸೇರಿದಂತೆ ಎಲ್ಲರೂ ಪಂಜಾಬ್‌ನಲ್ಲಿ ಪ್ರಚಾರ ನಡೆಸಿದ್ದರು. ಆದರೆ, ಗೆಲುವು ಸಾಧಿಸಲು ನಿಮಗೆ ಸಾಧ್ಯವಾಗಲಿಲ್ಲ ಎಂದರು.

ಪಂಚ ರಾಜ್ಯಗಳ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶ, ಮಣಿಪುರ,ಗೋವಾ ಮತ್ತು ಉತ್ತರಾಖಂಡದಲ್ಲಿ ಮತ್ತೊಂದು ಅವಧಿಗೆ ಸರ್ಕಾರ ರಚನೆ ಮಾಡುವಲ್ಲಿ ಯಶಸ್ವಿಯಾಗಿದೆ. ಪಂಜಾಬ್​​ನಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್​ ಸಂಪೂರ್ಣ ಸೋತಿದ್ದು, ಆಮ್​ ಆದ್ಮಿ ಭರ್ಜರಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.


Spread the love

About Laxminews 24x7

Check Also

ನಿಧಿಯಾಸೆಗೆ ದೇವರ ಕಲ್ಲನ್ನು ಕೆಡವಿದ್ದ ಕಳ್ಳರನ್ನು ಬಂಧಿಸಿದ ಪೊಲೀಸರು: ಮೂಕಪ್ಪಸ್ವಾಮಿ ಪವಾಡ ಎಂದ ಗ್ರಾಮಸ್ಥರು

Spread the loveಹಾವೇರಿ: 4 ತಿಂಗಳ ಹಿಂದೆ ನಿಧಿ ಆಸೆಗಾಗಿ ಕೋಣಕಲ್ಲು ಭರಮಪ್ಪ ದೇವರ ಕಲ್ಲನ್ನು ಕೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ