ಬೆಂಗಳೂರು: ರಾತ್ರಿ ವೇಳೆಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಕಾಲಿಗೆ ಗುಂಡು ಹಾರಿಸಿರುವ ಪೊಲೀಸರು, ಆರೋಪಿಗಳನ್ನು ಬಂಧನ ಮಾಡಿರೋ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಬಳಿ ನಡೆದಿದೆ.
ಶ್ರೀನಿವಾಸ್ ಅಲಿಯಾಸ್ ರಾಜು ಗುಂಡೇಟು ತಿಂದ ಆರೋಪಿಯಾಗಿದ್ದು, ಇಂದು ಮುಂಜಾನೆ 5 ಗಂಟೆ ಸಮಯದಲ್ಲಿ ಘಟನೆ ನಡೆದಿದೆ. ಟಾಟಾ ಸುಮೋನಲ್ಲಿ ಬಂದು ಲಾರಿಗಳಲ್ಲಿ ಡೀಸೆಲ್ ಕದಿಯುತ್ತಿದ್ದ ಖತರ್ನಾಕ್ ಗ್ಯಾಂಗ್, ಆನೇಕಲ್ನ ಜಿಗಣಿಯ ಕೆಇಬಿ ಸರ್ಕಲ್ ಬಳಿ ಲಾರಿಯೊಂದರಲ್ಲಿ ಡೀಸೆಲ್ ಕಾಯುತ್ತಿದ್ದ ವೇಳೆ ರೆಡ್ಹ್ಯಾಂಡ್ ಆಗಿ ಪೊಲೀಸರ ಕೈಗೆ ಸಿಕ್ಕಿಬಿದ್ದರು. ಕಳ್ಳತನ ಮಾಡೋ ವೇಳೆ ಪೊಲೀಸರು ದಾಳಿ ಮಾಡಿದ್ದರು. ಕೂಡಲೇ ತಮ್ಮ ಬಳಿ ಇದ್ದ ಮಾರಕಾಸ್ತ್ರಗಳಿಂದ ಪೊಲೀಸರ ಮೇಲೆ ದಾಳಿಗೆ ಮುಂದಾಗಿದ್ದರು. ಕೂಡಲೇ ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.