Breaking News

ಅವಳಿ ಹೆಣ್ಣುಮಕ್ಕಳಿಗೆ ಜನ್ಮ ನೀಡಿದ ಮಹಿಳೆಯೊಬ್ಬರು ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ಖಾನಾಪೂರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

Spread the love

ಬೆಳಗಾವಿ: ಅವಳಿ ಹೆಣ್ಣುಮಕ್ಕಳಿಗೆ ಜನ್ಮ ನೀಡಿದ ಮಹಿಳೆಯೊಬ್ಬರು ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ಖಾನಾಪೂರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಖಾನಾಪುರ ತಾಲೂಕಿನ ಗಂಗವಾಳಿ ಗ್ರಾಮದ ನಿವಾಸಿ ಉಜ್ವಲಾ ಅರುಣ ಶಿಂಧೆ(24) ಮೃತ ಮಹಿಳೆ. ಉಜ್ವಲಾ ನಿನ್ನೆ ತೀವ್ರ ಹೆರಿಗೆ ನೋವಿನಿಂದಾಗಿ ಖಾನಾಪೂರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಆರೋಗ್ಯ ಪರೀಕ್ಷಿಸಿದ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಹೊಟ್ಟೆಯಲ್ಲಿ ಅವಳಿ ಮಕ್ಕಳಿರುವುದನ್ನು ಗಮನಿಸಿ ಕೂಡಲೇ ಹೆರಿಗೆ ಮಾಡಿಸಿದ್ದಾರೆ. 

 

ಹೆರಿಗೆ ಸಮಯದಲ್ಲಿ ತೀವ್ರ ರಕ್ತಸ್ರಾವದಿಂದ ನಿತ್ರಾಣಗೊಂಡಿದ್ದ ಬಾಣಂತಿ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ಶಿಶುಗಳ ಆರೋಗ್ಯ ಪರೀಕ್ಷಿಸಿದ ವೈದ್ಯರು ಅವು ಸಮರ್ಪಕವಾಗಿ ಬೆಳವಣಿಗೆ ಹೊಂದಿರದ ಕಾರಣ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನವಜಾತ ಶಿಶುಗಳು ಆರೋಗ್ಯದಿಂದಿದ್ದು, ಚೇತರಿಸಿಕೊಳ್ಳುತ್ತಿವೆ ಎಂದು ಮೂಲಗಳಿಂದ ವರದಿಯಾಗಿದೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ