ಚಿಕ್ಕೋಡಿ: ರಸ್ತೆ ಬದಿ ನಿಂತಿದ್ದ ಕ್ಯಾಂಟರ್‌ಗೆ ಇನ್ನೊವಾ ಕಾರು ಡಿಕ್ಕಿಯಾದ ಪರಿಣಾಮ ತಾಯಿ ಹಾಗೂ ಮಗಳು ಸ್ಥಳದಲ್ಲಿಯೇ ಮೃತ ಪಟ್ಟಿರುವ ಧಾರುಣ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಹುಕ್ಕೇರಿ ತಾಲೂಕಿನ ನರಸಿಂಗಪೂರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಬದಿ ನಿಂತಿದ್ದ ಕ್ಯಾಂಟರ್‌ಗೆ ಇನೋವಾ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಸ್ಥಳದಲ್ಲೆ ತಾಯಿ ಹಾಗೂ ಮಗಳು ಸಾವನ್ನಪ್ಪಿದ್ದು, ತಂದೆಯ ಸ್ಥಿತಿ ಚಿಂತಾಜನಕವಾಗಿದೆ. ಮೃತರು ಸಂಕೇಶ್ವರ ಪಟ್ಟಣದ ಖ್ಯಾತ ವೈದ್ಯೆ ಶ್ವೇತಾ ಮುರಗೋಡ(41), ಶಿಯಾ(7)ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಕಾರು ಚಲಾಯಿಸುತ್ತಿದ್ದ ವೈದ್ಯ ಸಚೀನ್ ಮುರಗೋಡೆ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳು ವೈದ್ಯ ಸಚೀನ್ ಮುರಗೋಡೆ ಅವರನ್ನು ಚಿಕಿತ್ಸೆಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
Laxmi News 24×7