Breaking News

ಕೈ ಕಾಲು ಕಟ್ಟಿ ಹಾಕಿ ನೇಣು ಬಿಗಿದು ಯುವಕನಕೊಲೆ

Spread the love

ಬೆಳಗಾವಿ: ಕೈ ಕಾಲು ಕಟ್ಟಿ ಹಾಕಿ ನೇಣು ಬಿಗಿದು ಯುವಕನನ್ನು ಕ್ರೂರವಾಗಿ ಕೊಲೆ ಮಾಡಿ ಎಸೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣ ಹೊರವಲಯದ ಆರ್‌ಟಿಓ ಕಛೇರಿ ಮುಂಭಾಗದಲ್ಲಿ ನಡೆದಿದೆ. ಅಥಣಿ ತಾಲೂಕಿನ ದರೂರ ಗ್ರಾಮದ ಸಿದ್ಧಾರೂಢ ಶಿರಗುಪ್ಪಿ(25) ಕೊಲೆಯಾದ ವ್ಯಕ್ತಿ.

ಸಿದ್ಧಾರೂಢ ಶಿರಗುಪ್ಪಿ ಕಳೆದ 2 ವರ್ಷಗಳಿಂದ ಮಾಜಿ ಡಿಸಿಎಂ ಸಹೋದರ, ಕೃಷ್ಣಾ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಪರಪ್ಪಾ ಸವದಿಯ ಕಾರು ಚಾಲನಕನಾಗಿ ಕಾರ್ಯ ನಿರ್ವಹಿಸುತ್ತಿದ್ದ. ಕಳೆದ ರಾತ್ರಿ ಪರಪ್ಪ ಸವದಿ ಜೊತೆ ಉಗಾರ ಗ್ರಾಮಕ್ಕೆ ತೆರಳಿದ್ದ ಸಿದ್ಧಾರೂಢ ರಾತ್ರಿ 11 ಗಂಟೆಗೆ ಅಥಣಿ ಪಟ್ಟಣಕ್ಕೆ ವಾಪಸ್ ಬಂದು ರಾತ್ರಿ ಮನೆಗೆ ತೆರಳುತ್ತಿದ್ದಾಗ ತಡ ರಾತ್ರಿ ಕೊಲೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ನಟ ವಿಷ್ಣುವರ್ಧನ್, ನಟಿ ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ ಸಂಪುಟ ಸಭೆ ತೀರ್ಮಾನ

Spread the loveಬೆಂಗಳೂರು: ನಟ ವಿಷ್ಣುವರ್ಧನ್ ಹಾಗೂ ನಟಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ