Breaking News

ಬಿಜೆಪಿಯ ಚುನಾವಣಾ ಪ್ರಚಾರದ ಹಾಡುಗಳಿಗೆ ನೃತ್ಯ ಮಾಡುತ್ತಿದ್ದ ಗ್ರಾಮಸ್ಥರ ಮೇಲೆ ಜನರ ಗುಂಪೊಂದು ದಾಳಿ

Spread the love

ಲಕ್ನೋ: ಬಿಜೆಪಿಯ ಚುನಾವಣಾ ಪ್ರಚಾರದ ಹಾಡುಗಳಿಗೆ ನೃತ್ಯ ಮಾಡುತ್ತಿದ್ದ ಗ್ರಾಮಸ್ಥರ ಮೇಲೆ ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಕಾನ್ಪುರ ದೇಹತ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ಜಿಲ್ಲೆಯ ರಸೂಲಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಸಂಭ್ರಮಾಚರಣೆಗಾಗಿ ತಮ್ಮ ಮನೆಯಲ್ಲಿ ಡಿಜೆ ಹಾಕಿ ಕುಟುಂಬಸ್ಥರು, ಸಂಬಂಧಿಕರು ಹಾಗೂ ಸ್ಥಳೀಯರು ಬಿಜೆಪಿ ಚುನಾವಣಾ ಥೀಮ್ ಸಾಂಗ್‍ಗಳಿಗೆ ಕುಣಿಯುತ್ತಿದ್ದರು. ಸ್ಥಳಕ್ಕೆ ಬಂದ ಸಮಾಜವಾದಿ ಪಕ್ಷದ ಕಾರ್ಯಕರ್ತರು ಬಿಜೆಪಿ ಚುನಾವಣಾ ಥೀಮ್ ಹಾಡುಗಳನ್ನು ಪ್ಲೇ ಮಾಡುವುದನ್ನು ನಿಲ್ಲಿಸುವಂತೆ ಡಿಜೆ ಆಯೋಜಕರನ್ನು ಕೇಳಿದರು. ಡಿಜೆ ಆಯೋಜಕರು ಕೇಳದೆ ಇದ್ದಾಗ ಆತನನ್ನು ನಿಂದಿಸಿ, ಥಳಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.


Spread the love

About Laxminews 24x7

Check Also

ನಟ ವಿಷ್ಣುವರ್ಧನ್, ನಟಿ ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ ಸಂಪುಟ ಸಭೆ ತೀರ್ಮಾನ

Spread the loveಬೆಂಗಳೂರು: ನಟ ವಿಷ್ಣುವರ್ಧನ್ ಹಾಗೂ ನಟಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ