Breaking News

ಜಲಮಂಡಳಿಯಿಂದ ಅಗೆದಿದ್ದ ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು

Spread the love

ಬೆಂಗಳೂರು: ಜಲಮಂಡಳಿಯಿಂದ ಅಗೆದಿದ್ದ ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಅಶ್ವಿನ್ (27) ಮೃತ ದುರ್ದೈವಿ. ಎಂಎಸ್ ಪಾಳ್ಯದ ಮುನೇಶ್ವರ ಲೇಔಟ್ ಕಡೆ ಹೋಗುವ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಅಶ್ವಿನ್ ಅವರು ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರು ಮೂಲತಃ ಹಾವೇರಿ ಜಿಲ್ಲೆಯವರಾಗಿದ್ದಾರೆ.

ಅಶ್ವಿನ್ ತಾಯಿಗೆ ಊಟ ತರಲು ಹೊರಗಡೆ ಹೋಗಿದ್ದರು. ಎಂಎಸ್ ಪಾಳ್ಯದ ಹೋಟೆಲ್ ಒಂದರಲ್ಲಿ ಆಹಾರ ಕಟ್ಟಿಸಿಕೊಂಡು ವಾಪಸ್ ಬರುವಾಗ ಈ ಅಪಘಾತ ನಡೆದಿದೆ. ಬೀದಿದೀಪ ಸರಿಯಾಗಿ ಕಾರ್ಯ ನಿರ್ವಹಿಸದ ಕಾರಣ ಗುಂಡಿ ಇರುವುದು ಕಂಡಿರಲಿಲ್ಲ. ಇದರಿಂದಾಗಿ ಜಲಮಂಡಳಿಯವರು ಅಗೆದಿದ್ದ ರಸ್ತೆ ಗುಂಡಿಗೆ ಬಿದ್ದಿದ್ದಾರೆ. ಇದನ್ನೂ 

ಈ ಹಿನ್ನೆಲೆಯಲ್ಲಿ ಅಶ್ವಿನ್‍ಗೆ ತೀವ್ರ ಗಾಯಗೊಂಡಿದ್ದರು. ಇದನ್ನು ನೋಡಿದ ಸ್ಥಳೀಯರು ಆಂಬ್ಯುಲೆನ್ಸ್‌ಗೆ ಕರೆ ಮಾಡಿದ್ದಾರೆ. ಆದರೆ ಒಂದು ಗಂಟೆಯಿಂದ ಆಂಬ್ಯುಲೆನ್ಸ್‌ಗೆ ಕಾಲ್ ಮಾಡಿದರೂ ಸ್ಥಳಕ್ಕೆ ಬಾರಲಿಲ್ಲ. ನಂತರ ಸ್ಥಳೀಯರೇ ಕಾರಿನಲ್ಲಿ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬೆಳಗಿನ ಜಾವ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಗುಂಡಿಗೆ ಬಿದ್ದು ಮೃತಪಟ್ಟ ಜಾಗದಲ್ಲಿ ಮೃತ ಅಶ್ವಿನ್ ಸ್ನೇಹಿತರು ಜಮಾಯಿಸಿ ಘಟನೆಗೆ ಬಿಬಿಎಂಪಿ, ಜಲಮಂಡಳಿಯ ನಿರ್ಲಕ್ಷ್ಯವೇ ಕಾರಣ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಮಹಿಷ ದಸರಾ | ಯಾರಿಗೂ ತೊಂದರೆ ಆಗದಂತೆ ಮಾಡಿಕೊಳ್ಳಬಹುದು: ಮಹದೇವಪ್ಪ

Spread the love ಮೈಸೂರು: ‘ಯಾರಿಗೂ, ಯಾವ ತೊಂದರೆಯೂ ಆಗದಂತೆ ಯಾರು ಬೇಕಾದರೂ ಅವರವರ ಧಾರ್ಮಿಕ ಆಚರಣೆ ಮಾಡಿಕೊಳ್ಳಬಹುದು’ ಎಂದು ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ