ಲಕ್ಷ್ಮೇಶ್ವರ(ಗದಗ): ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ಗೋನಾಳ ಗ್ರಾಮದ ಬಳಿ ಸೋಮವಾರ ನಡೆದಿದೆ.
ಗದಗ ಹಾವೇರಿ ಮಾರ್ಗದಲ್ಲಿ ಸಂಚಾರಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣದ ತಪ್ಪಿ, ಈ ದುರ್ಘಟನೆ ಸಂಭವಿಸಿದೆ.
ಬಸ್‌ನಲ್ಲಿ ಸುಮಾರು ೫೦ ಜನರ ಪ್ರಯಾಣಿಕರಿದ್ದರು. ಅವರಲ್ಲಿ ೨೦ಕ್ಕೂ ಹೆಚ್ಚು ಜನರು ಗಾಯಾಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸಮೀಪದ ಲಕ್ಷೇಶ್ವರ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಲಕ್ಷ್ಮೇಶ್ವರ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದರು