ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಲವು ವರ್ಷಗಳಿಂದ ಪೌರಕಾರ್ಮಿಕರು ( Civic Workers ) ಖಾಯಂ ನಿರೀಕ್ಷೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರನ್ನು ಖಾಯಂ ಮಾಡುವ ಬಗ್ಗೆ ರಾಜ್ಯ ಸರ್ಕಾರ ಶೀಘ್ರವೇ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದ್ದಾರೆ.
ಇಂದು ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಹಾಗೂ ಶಾಸಕ ಪಿ ರಾಜೀವ್ ಮಾಡಿದ ಪ್ರಸ್ತಾಪಕಕ್ಕೆ ಉತ್ತರ ನೀಡಿದಂತ ಸಿಎಂ ಬಸವರಾಜ ಬೊಮ್ಮಾಯಿವರು, ಪೌರ ಕಾರ್ಮಿಕರನ್ನು ಗುತ್ತಿಗೆದಾರರ ಮೂಲಕ ನೇಮಕಮಾಡಿಕೊಳ್ಳಲಾಗಿತ್ತು. ಅವರ ಸರಿಯಾಗಿ ವೇತನ ಪಾವತಿ ನೀಡುತ್ತಿರಲಿಲ್ಲ. ಈಗ ಸರ್ಕಾರ ಆ ಪೌರ ಕಾರ್ಮಿಕರ ಖಾತೆಗೆ ನೇರವಾಗಿ ವೇತನ ಜಮಾ ಮಾಡಲಾಗುತ್ತಿದೆ ಎಂದು ತಿಳಿಸಿದರು.