Breaking News

ಬೆಳಗಾವಿ: ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದಲ್ಲಿ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್-19ರ ಲಸಿಕಾಕರಣದ ಕಾರ್ಯಕ್ರ

Spread the love

ಬೆಳಗಾವಿ: ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದಲ್ಲಿ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್-19ರ ಲಸಿಕಾಕರಣದ ಕಾರ್ಯಕ್ರಮದಡಿ ಕಾರ್ಬಿವ್ಯಾಕ್ಸ್ ಲಸಿಕಾ ಅಭಿಯಾನ ಮಾಡಲಾಗುತ್ತಿದೆ

ನಗರದ ಬೀಮ್ಸ್ ಮಹಾವಿದ್ಯಾಲಯದಲ್ಲಿ ನಡೆಯುವ ಕಾರ್ಯಕ್ರಮವನ್ನು ನಗರದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಉದ್ಘಾಟನೆ ಮಾಡಿ, ನೇರವೇರಿಸಲಿದ್ದಾರೆ. ಈ ವೇಳೆ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್-19 ಲಸಿಕಾಕರಣ ಕಾರ್ಯಕ್ರಮದಡಿ ನಡೆಯುವ ಕಾರ್ಬಿವ್ಯಾಕ್ಸ್ ಲಸಿಕಾ ಅಭಿಯಾನ ಹಾಗೂ 60 ವಯಸ್ಸಿನ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ ಮುನ್ನೆಚ್ಚರಿಕ ಕ್ರಮವಾಗಿ ಲಸಿಕಾ ಅಭಿಯಾನ ನಡೆಯುತ್ತಿದೆ.ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಶಶಿಕಾಂತ ಮುನ್ಯಾಳ, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಅಧಿಕಾರಿ ಡಾ. ಈಶ್ವರ ಗಡದ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಆಯ್ದ 20 ಮಕ್ಕಳಿಗೆ ಲಸಿಕೆಯನ್ನು ನೀಡಲಾಗುತ್ತದೆ. ಉಳಿದ ಎಲ್ಲಾ ಮಕ್ಕಳಿಗೆ ಅವರ ಶಾಲೆಗಳು ಹಾಗೂ ನಗರ ಮತ್ತು ಗ್ರಾಮದಲ್ಲಿ ಲಸಿಕಾ ಕೇಂದ್ರಗಳಲ್ಲಿ ನೀಡಲಾಗುವದು ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ದುರ್ಗಾದೇವಿ ಮಂಜುನಾಥ ದತ್ತ ಮಂದಿರ ಟ್ರಸ್ಟ್ ಜಾಂಬೋಟ್ಟಿಯ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಭಾಗಿ

Spread the love ದುರ್ಗಾದೇವಿ ಮಂಜುನಾಥ ದತ್ತ ಮಂದಿರ ಟ್ರಸ್ಟ್ ಜಾಂಬೋಟ್ಟಿಯ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ