ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ರಾಜ್ಯದ ಹಲವಡೆ ಎಸಿಬಿ ಅಧಿಕಾರಿಗಳು ಶಾಕ್ ನೀಡಿದ್ದು, ಬೆಂಗಳೂರಿನ 3 ಕಡೆ ಸೇರಿದಂತೆ ರಾಜ್ಯದ 78 ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ರಾಜ್ಯದ 18 ಸರ್ಕಾರಿ ಅಧಿಕಾರಿಗಳು ಸೇರಿದ 78 ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, 18 ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ 200 ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ಏಕಕಾಲದಲ್ಲೇ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಗದಗ ಡಿಜಿ ಕಚೇರಿಯ ಉಪತಹಶೀಲ್ದಾರ್ ಬಿ.ಎಸ್. ಅಣ್ಣಿಗೇರಿ ಮನೆ, ಕಚೇರಿಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿ.ಎಸ್. ಅಣ್ಣಿಗೇರಿ ಅವರ ಗದಗದ ಪಂಚಾಕ್ಷರಿ ನಗರದ ಮನೆ, ಕಚೇರಿ ಹಾಗೂ ಬಿ.ಎಸ್. ಅಣ್ಣಿಗೇರಿ ಅವರ ಅಳಿಯನ ಮನೆ ಮೇಲೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.