Breaking News

ಅತಂತ್ರ ಸ್ಥಿತಿಯಲ್ಲಿರೋ ಉಕ್ರೇನ್ ರಿಟರ್ನ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಹಾಯ ಮಾಡುತ್ತಾ..?

Spread the love

ಬೆಂಗಳೂರು: ಸದ್ಯ ಯುದ್ಧಪೀಡಿತ ಉಕ್ರೇನ್‍ನಿಂದ ವಾಪಸ್ಸಾಗಿರುವ ವಿದ್ಯಾರ್ಥಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ. ಈ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಹಾಯ ಮಾಡುತ್ತಾ ಎಂಬ ಪ್ರಶ್ನೆ ಎದ್ದಿದೆ. ಯಾಕೆಂದರೆ ಏನೇ ನಿರ್ಧಾರ ಕೈಗೊಳ್ಳಬೇಕಾದ್ರು, ರಾಜ್ಯಕ್ಕೆ ಕೇಂದ್ರ ಅನುಮತಿ ಬೇಕಾಗುತ್ತದೆ.

ರಾಜ್ಯ ಸರ್ಕಾರದ ಮುಂದಿರುವ ಆಯ್ಕೆಗಳು:
ಉಕ್ರೇನ್ ನಿಂದ ಬಂದಿರೋ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ರಾಜ್ಯ ಸರ್ಕಾರಕ್ಕೂ ಸದ್ಯ ಯಾವುದೇ ಮಾರ್ಗಗಳು ಇಲ್ಲ. ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಕೋರ್ಸ್ ಮುಂದುವರಿಸಲು ಅವಕಾಶ ಕೊಡಲು ಅಧಿಕಾರ ಇಲ್ಲ. ರಾಜ್ಯ ಸರ್ಕಾರ ಏನೇ ನಿರ್ಧಾರ ಮಾಡಬೇಕಾದ್ರು ಕೇಂದ್ರ ಸರ್ಕಾರದ ಅನುಮತಿಬೇಕು. ಕೇಂದ್ರ ಸರ್ಕಾರ ನಿಯಮ ತಂದು ಅವಕಾಶ ಮಾಡಿಕೊಟ್ಟರೆ ಮಾತ್ರ ರಾಜ್ಯ ಸರ್ಕಾರ ಮುಂದಿನ ಕ್ರಮ ತೆಗೆದುಕೊಳ್ಳಬಹುದಾಗಿದೆ.ವಿದ್ಯಾರ್ಥಿಗಳ ಮುಂದಿರೋ ಆಯ್ಕೆಗಳು:
ವಿದ್ಯಾರ್ಥಿಗಳು ರಾಜ್ಯದಲ್ಲಿ ಕೋರ್ಸ್ ಮುಂದುವರೆಸುತ್ತೇವೆ ಅಂತ ಸಿಎಂ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಉನ್ನತ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಬೇಕು. ವಿದ್ಯಾರ್ಥಿಗಳ ಮನವಿಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ರಾಜ್ಯ ಸರ್ಕಾರ ತರಬೇಕಾಗುತ್ತೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ