ಗುವಾಹಟಿ(ಅಸ್ಸೋಂ): ಕೇವಲ 24 ಗಂಟೆಯೊಳಗೆ ಎರಡು ಎನ್ಕೌಂಟರ್ ನಡೆಸಿರುವ ಅಸ್ಸೋಂ ಪೊಲೀಸರು ಇಬ್ಬರು ಅತ್ಯಾಚಾರ ಪ್ರಕರಣದ ಆರೋಪಿಗಳನ್ನ ಎನ್ಕೌಂಟರ್ ಮಾಡಿದ್ದಾರೆ. ಮೊದಲನೇ ಎನ್ಕೌಂಟರ್ ಗುವಾಹಟಿ ಹಾಗೂ ಎರಡನೇಯದು ಉದಲಗುರಿ ಜಿಲ್ಲೆಯಲ್ಲಿ ನಡೆದಿದೆ.
ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಮಾರ್ಚ್ 10ರಂದು ರಾಜೇಶ್ ಎಂಬ ವ್ಯಕ್ತಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದನು. ಮರುದಿನ ಬಾಲಕಿ ಮೃತದೇಹ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದ ಪೊಲೀಸರು, ಆತನನ್ನ ಕೃತ್ಯ ನಡೆದ ಸ್ಥಳಕ್ಕೆ ಕರೆದುಕೊಂಡು ಹೋಗಿ, ಮಾಹಿತಿ ಪಡೆದುಕೊಳ್ಳುತ್ತಿದ್ದರು. ಈ ವೇಳೆ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಲು ರಾಜೇಶ್ ಮುಂದಾಗಿದ್ದು, ಆತನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದ ಆರೋಪಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.ಉದಲಗುರಿ ಜಿಲ್ಲೆಯಲ್ಲೂ ಇಂತಹ ಘಟನೆ ನಡೆದಿದ್ದು, ಅತ್ಯಾಚಾರ ಆರೋಪಿ ಪೊಲೀಸರ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಆತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆಗ ಆತನ ಪ್ರಾಣ ಸ್ಥಳದಲ್ಲೇ ಹಾರಿಹೋಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Laxmi News 24×7