Breaking News

ಮೂವರ ಹೆಂಡ್ತೀರ ಮುದ್ದಿನ ಗಂಡನ ಭೀಕರ ಹತ್ಯೆ..16 ಬಾರಿ ಇರಿದು ಕೊಲೆ ಮಾಡಿ ಪರಾರಿಯಾದ​ ಆ ನಾಲ್ವರ‍್ಯಾರು?

Spread the love

ಬೆಳಗಾವಿ: ವಾಕಿಂಗ್​ ಹೋದ ವ್ಯಕ್ತಿಯ ಮೇಲೆ ಖಾರದ ಪುಡಿ ಎರಚಿ, ಮಾರಾಕಾಸ್ತ್ರಗಳಿಂದ ಹದಿನಾರು ಬಾರಿ ಇರಿದು, ಬರ್ಬರವಾಗಿ ಹತ್ಯೆ ಮಾಡಿ ಕಾಲ್ಕಿತ್ತಿದ್ದಾರೆ. ಕೊಲೆಯಾದ ವ್ಯಕ್ತಿಯ ಹೆಸರು ರಾಜು ಮಲ್ಲಪ್ಪ ದೊಡ್ಡಬಣ್ಣವರ್ ಎಂದು ತಿಳಿದು ಬಂದಿದೆ.

46 ವರ್ಷದ ರಾಜು ಮೂರು ಜನರನ್ನ ಮದುವೆಯಾಗಿದ್ದ. ಹಾಗಂತ ಯಾರಿಗೂ ವಿಚ್ಛೇದನ ಕೂಡ ನೀಡಿಲ್ಲ. ಮದುವೆಯಾದ ವಿಚಾರ ಎಲ್ಲರಿಗೂ ತಿಳಿದಿತ್ತು. ರಾಜು ಮಂಗಳವಾರ ಭವಾನಿ ನಗರದ‌ ಮನೆಯಿಂದ ಎಂದಿನಂತೆ ಬೆಳಗ್ಗೆ ಆರು ಗಂಟೆಗೆ ವಾಕಿಂಗ್‌ಗೆ ತೆರಳಿದ್ದಾರೆ. ಈ ವೇಳೆ, ಎರಡನೇ ಹೆಂಡತಿಗೆ ಫೋನ್ ಕರೆ ಮಾಡಿದ್ದಾರೆ. ಆದರೆ, ಫೋನ್​​ ತಗೆದಿಲ್ಲ ಅನ್ನೋ ಕಾರಣಕ್ಕೆ ಒಬ್ಬರೇ ವಾಕ್ ಮಾಡಲು ಹೊರಟ್ಟಿದ್ದಾರೆ.

ಮನೆಯಿಂದ ಒಂದು ಕಿಮೀ ಹೋಗುವಷ್ಟರಲ್ಲಿ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು ರಾಜು ಕಣ್ಣಿಗೆ ಕಾರದ ಪುಡಿ ಎರಚಿದ್ದಾರೆ. ಆತ ಕಾರು ಇಳಿಯುತ್ತಿದ್ದಂತೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಈ ವೇಳೆ, ದುಷ್ಕರ್ಮಿಗಳು ರಾಜುವಿಗೆ ಹದಿನಾರು ಬಾರಿ ಇರಿದು ಪರಾರಿ ಆಗಿದ್ದಾರೆ. ತೀವ್ರ ಗಾಯಗೊಂಡಿದ್ದ ರಾಜು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ವಾಕಿಂಗ್ ಮಾಡುತ್ತಿದ್ದ ಕೆಲವರು ರಸ್ತೆಯಲ್ಲಿ ಶವ ಬಿದ್ದಿದ್ದನ್ನು ಗಮನಿಸಿ ಬೆಳಗಾವಿ ಗ್ರಾಮೀಣ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದರು. ಇತ್ತ ಡಿಸಿಪಿ ರವೀಂದ್ರ ಗಡಾದಿ ಕೂಡ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಇದಾದ ಬಳಿಕ ಶವವನ್ನ ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಮೂವರನ್ನ ಮದುವೆಯಾಗಿದ್ದ ಉದ್ಯಮಿ: ರಾಜು 22ವರ್ಷದ ಹಿಂದೆ ಉಮಾ ಎಂಬುವರನ್ನು ಮದುವೆಯಾಗಿದ್ದ. ಎರಡು ಮಕ್ಕಳಿದ್ದು, ಇಬ್ಬರಿಗೂ ವೈದ್ಯಕೀಯ ಶಿಕ್ಷಣ ಓದಿಸುತ್ತಿದ್ದಾರೆ. ಆದರೆ, ನಾಲ್ಕು ವರ್ಷದ ಹಿಂದೆ ಮೊದಲ ಹೆಂಡತಿ ತನ್ನ ಮಕ್ಕಳನ್ನ ಇವರ ಬಳಿ ಬಿಟ್ಟು ಬೆಂಗಳೂರು ಸೇರಿಕೊಂಡಿದ್ದರು. ಇತ್ತ ಎಂಟು ವರ್ಷದ ಹಿಂದೆ ಮಹಾರಾಷ್ಟ್ರದ ಲಾತೂರ್​ನ ಕಿರಣಾ ಎಂಬುವಳನ್ನೂ ರಾಜು ಮದುವೆಯಾಗಿದ್ದ. ಅವರಿಗೂ ಎರಡು ಮಕ್ಕಳಿವೆ.


Spread the love

About Laxminews 24x7

Check Also

ಭೂಮಿ‌ ಇರೋವರೆಗೂ ಬಸವಣ್ಣನವರ ವಿಚಾರಧಾರೆಗಳನ್ನ ಕಾಪಾಡಬೇಕು: ಬಸವ ಸಂಸ್ಕೃತಿ ಅಭಿಯಾನದಲ್ಲಿ ಸತೀಶ ಜಾರಕಿಹೊಳಿ

Spread the loveಬೆಳಗಾವಿ: “ಭೂಮಿ ಇರುವವರೆಗೆ ಬಸವಣ್ಣನವರ ವಿಚಾರಗಳನ್ನು ಕಾಪಾಡುವ ಪ್ರಯತ್ನ ಮಾಡಬೇಕಿದೆ. ದೇಶದಲ್ಲಿ ಮೂಲ ವಿಚಾರ ಮತ್ತು ಇತಿಹಾಸವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ