ಬೆಂಗಳೂರು: ರಾಜ್ಯದ ವಿವಿಧ ವಸತಿ ಯೋಜನೆಗಳಲ್ಲಿ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಫಲಾನುಭವಿಗಳ ಆಯ್ಕೆ ಮಾಡಲು ನಿಗದಿಪಡಿಸಿರುವ ಆದಾಯ ಮಿತಿಯನ್ನು ಹೆಚ್ಚಳ ಮಾಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ ಆದಾಯ ಮಿತಿ ಹೆಚ್ಚಳ ಮಾಡಿರುವುದನ್ನು ಘೋಷಿಸಿದ್ಧಾರೆ.
ಈ ಮೊದಲು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಯೋಜನೆಗಳ ಫಲಾನುಭವಿಗಳ ಆಯ್ಕೆಗೆ ಆದಾಯ ಮಿತಿಯನ್ನು 32 ಸಾವಿರಕ್ಕೆ ನಿಗದಿಪಡಿಸಲಾಗಿತ್ತು, ಈಗ ಇದನ್ನು 1.20 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಇನ್ನು ನಗರಪ್ರದೇಶದಲ್ಲಿ 87 ಸಾವಿರ ರೂ. ಇದ್ದ ಆದಾಯ ಮಿತಿಯನ್ನು 2 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ ಎಂದು ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ಧಾರೆ.