ಬೆಂಗಳೂರು: ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿಯವರು ( CM Basavaraj Bommai ) ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರಿಗೆ ( Karnataka Government Employees ) ವೇತನ ತಾರತಮ್ಯ ಬಗ್ಗೆ ಕೇಳಲಾದಂತ ಚುಕ್ಕೆ ಗುರುತಿನ ಪ್ರಶ್ನೆಗೆ ವೇತನ ಪರಿಷ್ಕರಿಸೋದಕ್ಕೆ ಆಯೋಗ ರಚನೆ ಮಾಡೋದಾಗಿ ತಿಳಿಸಿದ್ದರು.
ಇದೀಗ ಇಂದು ವಿಧಾನಸಭೆಯಲ್ಲಿ, ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ಸರ್ಕಾರದಿಂದ ಆಯೋಗ ರಚನೆ ಮಾಡೋದಾಗಿ ಘೋಷಣೆ ಮಾಡಿದ್ದಾರೆ.
ಇಂದು ವಿಧಾನಸಭೆಯಲ್ಲಿ ಈ ಬಗ್ಗೆ ಸದಸ್ಯರು ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಸಿಎಂ ಬಸವರಾಜ ಬೊಮ್ಮಾಯಿಯವರು, ಈಗಾಗಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು 7ನೇ ವೇತನ ಆಯೋಗದ ಅನ್ವಯ ಕೇಂದ್ರ ಸರ್ಕಾರಿ ನೌಕರರಿಗೆ ವೇತನ ನೀತಿ ಜಾರಿಗೊಳಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರಿಗೂ ವೇತನ ಪರಿಷ್ಕರಣೆ ಸಲುವಾಗಿ ಸಮಿತಿ ರಚಿಸುವಂತೆ ಪತ್ರ ಬರೆದಿರೋದಾಗಿ ಹೇಳಿದರು.