Breaking News

ತುಕ್ಕಾನಟ್ಟಿ ಗ್ರಾಮದಲ್ಲಿ ಪುನೀತ್ ರಾಜಕುಮಾರ್ ಜನ್ಮದಿನ ಅಂಗವಾಗಿ ಮಾ.17ರಂದು ಬೆಳಿಗ್ಗೆ ನೇತ್ರದಾನ

Spread the love

ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ಗುರುನಾಥ್ ಉಪ್ಪಾರ್ ಅವರ ನೇತೃತ್ವ ಹಾಗೂ ಬೈಲಹೊಂಗಲನ ಡಾ.ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಪುನೀತ್ ರಾಜಕುಮಾರ್ ಜನ್ಮದಿನ ಅಂಗವಾಗಿ ಮಾ.17ರಂದು ಬೆಳಿಗ್ಗೆ ನೇತ್ರದಾನಕ್ಕೆ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬೆಳಗಾವಿಯ ಕೆಎಲ್‍ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆಯ ನೇತ್ರ ಭಂಡಾರಕ್ಕೆ 50 ಜನರು ಸ್ವಯಂ ಪ್ರೇರಿತರಾಗಿ ನೇತ್ರದಾನ ಮಾಡಲು ನೋಂದಣಿ ಮಾಡಿಕೊಳ್ಳಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬೆಳಗಾವಿಯ ಅಮ್ಮ ಪ್ರತಿμÁ್ಠನದ ಅಧ್ಯಕ್ಷ ಬಾಳಾಸಾಹೇಬ ಉದಗಟ್ಟಿ ಉಪಸ್ಥಿತಿ ಇರಲಿದ್ದಾರೆ ಎಂದು ಡಾ.ರಾಮಣ್ಣವರ ಚಾರಿಟೇಬಲ್ ಟ್ರಸ್ಟಿನ ಕಾರ್ಯದರ್ಶಿ ಡಾ.ಮಹಾಂತೇಶ ರಾಮಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೇತ್ರದಾನ ಚರ್ಮ ದಾನ ಹಾಗೂ ದೇಹದಾನ ಮಾಡಲು ಇಚ್ಚಿಸುವವರು ಡಾಕ್ಟರ್ ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ 9242496497 ಸಂಪರ್ಕಿಸಬಹುದು


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ