Breaking News

ಬೆಳಗಾವಿಯ ಆಟೋನಗರದಲ್ಲಿನ ಸ್ಟಾಕ್ ಯಾರ್ಡ್‍ನಲ್ಲಿ ಆಕಸ್ಮಿಕವಾಗಿ ಬೆಂಕಿ

Spread the love

ಬೆಳಗಾವಿಯ ಆಟೋನಗರದಲ್ಲಿನ ಸ್ಟಾಕ್ ಯಾರ್ಡ್‍ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಲಕ್ಷಾಂತರ ರೂಪಾಯಿ ಮೌಲ್ಯದ ಕೈಗಾರಿಕಾ ವೇಸ್ಟೇಜ್ ಬೆಂಕಿಗಾಹುತಿಯಾಗದೆ.

ಹೌದು ಇತ್ತೀವೆಗೆ ಬೆಳಗಾವಿ ನಗರದಲ್ಲಿ ಬೆಂಕಿ ಅವಘಡಗಳಿ ದಿನದಿಂದ ದಿನಕ್ಕೆ ಹೆಚಚಾಗುತ್ತಿವೆ. ಆಕಸ್ಮಿಕವಾಗಿ ಕಾಣಿಸಿಕೊಳ್ಳುವ ಬೆಂಕಿಯಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತಿಗಳು ಬೆಂಕಿಗೆ ಆಹುತಿಯಾಗುತ್ತಿವೆ. ಹಾಗೆಯೇ ಇಂದು ಆಟೋ ನಗರದಲ್ಲಿನ ವಿವಿಧ ಇಂಡಸ್ಟ್ರೀಸ್‍ಗಳ ವೇಸ್ಟೇಜ್ ಸ್ಟಾಕ್ ಮಾಡುವ ಸ್ಟಾಕ್ ಯಾರ್ಡ್‍ನಲ್ಲಿ ಇಂದಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ರೂಪಾಯಿ ಮೌಲ್ಯದ ಕೈಗಾರಿಕೆಯ ವೇಸ್ಟೇಜ್ ಬೆಂಕಿಗಾಹುತಿಯಾಗಿದೆ. ಇನ್ನು ಸ್ಥಳೀಯರು ಈ ಕುರಿತು ಅಗ್ನಿಶಾಮಕ ದಳ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಚಾಕಚಕ್ಯತೆಯಿಂದ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಇದರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಇನ್ನು ನಷ್ಟವಾದ ಕುರಿತು ನಿರ್ದಿಷ್ಟ ಮಾಹಿತಿ ತಿಳಿದುಬಂದಿಲ್ಲ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ