ನವದೆಹಲಿ: ಮಣಿಪುರದಲ್ಲಿ ಎನ್. ಬಿರೆನ್ ಸಿಂಗ್ ಹಾಗೂ ಗೋವಾದಲ್ಲಿ ಪ್ರಮೋದ್ ಸಾವಂತ್ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಇತ್ತೀಚೆಗೆ ನಡೆದ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಗೆಲುವು ಸಾಧಿಸಿದೆ.
ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.
ಗೋವಾದಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದು, ಹೊಸ ಸರ್ಕಾರ ರಚನೆಯ ಸಂಬಂಧ ಪ್ರಮೋದ್ ಸಾವಂತ್ ಹೈಕಮಾಂಡ್ ಭೇಟಿಯಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು.
40 ಕ್ಷೇತ್ರಗಳ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿಯ (ಎಂಜಿಪಿ) ಇಬ್ಬರು ಶಾಸಕರು ಹಾಗೂ ಮೂವರು ಪಕ್ಷೇತರರು ಬಿಜೆಪಿಗೆ ಬೆಂಬಲ ಸೂಚಿಸಿದ್ದಾರೆ.
ಇತ್ತ ಬಿರೆನ್ ಸಿಂಗ್ ಅವರು ಇಂದು (ಬುಧವಾರ) ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
Laxmi News 24×7